ರಾಮನಗರ:ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡು ಸನ್ನದ್ದರಾಗಿರಬೇಕು. ಈ ಕುರಿತು ಯಾರುನಿರ್ಲಕ್ಷ್ಯ ವಹಿಸಬಾರದು ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ನೋಂದಣಿ & ಮುದ್ರಾಂಕ, ಭೂಮಿ ಮತ್ತು ಯುಪಿಓಆರ್) ಯ ಸರ ಕಾರದ ಪ್ರಧಾನ ಕಾರ್ಯದರ್ಶಿಗಳಾದ ವಿ. ರಶ್ಮಿ ಮಹೇಶ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ವಿಷಯಗಳು ಹಾಗೂ ಮುಂಗಾರು ಹಂಗಾಮಿನ ಹವಾಮಾನ ಅವಲೋಕನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿರುವ ತಗ್ಗು ಪ್ರದೇಶದ ಮನೆಗಳಿಗೆ ಎಚ್ಚರಿಕೆ ನೀಡಬೇಕು, ಚರಂಡಿ, ಚಾನಲ್‌ಗಳು ಸರಾಗವಾಗಿ ಮಳೆನೀರು ಹರಿದು ಹೋಗುವಂತೆ ಪರಿಶೀಲನೆ ಮಾಡಬೇಕು. ಯಾವುದೇ ದುರಸ್ಥಿಯಿದ್ದಲ್ಲಿ ಪರಿಶೀಲಿಸಿ ದುರಸ್ಥಿಗೆ ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ರಾಮನಗರ ಜಿಲ್ಲೆಯಲ್ಲಿ ಈ ಹಿಂದೆ ಭಾರಿ ಮಳೆ ಹಾಗೂ ನೆರೆ ಹಾವಳಿಯಿಂದ ಬಹಳಷ್ಟು ತೊಂದರೆಯಾಗಿದ್ದ ಪ್ರದೇಶಗಳನ್ನು ಖುದ್ದು ಭೇಟಿ ನೀಡಿ ಪರಿಶೀಲಿಸಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಮಳೆ ಹೆಚ್ಚು ಬೀಳುವ ಪ್ರದೇಶಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಅಧಿಕಾರಿಳಿಗೆ ಸೂಚಿಸಿದರು.
ಬೆಳೆ ನಷ್ಟ ಪರಿಹಾರಕ್ಕೆ ಇ-ಕೆವೈಸಿಯನ್ನು ಅಪ್‌ಲೋಡ್ ಮಾಡುವಾಗ ಡಾಟಾ ಎಂಟ್ರಿ ಆಪರೇಟರ್‌ಗಳು ತಪ್ಪಾಗಿ ನಮೂದಿಸಿದರೆ ಪರಿಹಾರ ಮೊತ್ತವು ಬೇರೆಯವರ ಖಾತೆಗೆ ಹೋಗುತ್ತದೆ. ಆದ್ದರಿಂದ ಡಾಟಾ ಎಂಟ್ರಿ ಆಪರೇಟರ್‌ಗಳು ಸರಿಯಾಗಿ ಇ-ಕೆವೈಸಿಗಳನ್ನು ಅಪ್‌ಲೋಡ್ ಮಾಡಬೇಕು ತಪ್ಪಾದರೆ ತಹಶೀಲ್ದಾರರು ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಮ0ಚನಬೆಲೆ ಡ್ಯಾಂ ಸುತ್ತಮುತ್ತಲು ಹಾಗೂ ಅರ್ಕಾವತಿ ನದಿಯ ಪಾತ್ರಗಳಲ್ಲಿ ತೊಂದರೆಗೀಡಾಗುವ ಸನ್ನಿವೇಶ ಎದುರಾಗಬಹುದು ಜನರ ಸ್ಥಳಾಂತರಕ್ಕೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. ಮುನ್ನೆಚ್ಚರಿಕೆ ವಹಿಸದೆ ಹೋದರೆ ಪರಿಸ್ಥಿತಿ ನಿಯಂತ್ರಣ ಅಸಾಧ್ಯ ಯಾವುದೇ ಸಿದ್ದತೆ ಮಾಡಿಕೊಳ್ಳದೆನಿರ್ಲಕ್ಷ್ಯ ವಹಿಸುವಂತಹ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಸಭೆಗೂ ಮುನ್ನ ರಾಮನಗರದಲ್ಲಿ ಕಳೆದ ಸಾಲಿನಲ್ಲಿ ಪ್ರವಾಹ ಪೀಡಿತವಾದ ಭಕ್ಷೀಕೆರೆ ಮತ್ತು ಗೌಸಿಯಾ ನಗರ ಬಳಿ ಇರುವ ಕಾಲುವೆ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಸ್ಥಿತರಿದ್ದರು.