ಬಳ್ಳಾರಿ: ಕೇಂದ್ರ ಸರ್ಕಾರದ ನಶಾ ಮುಕ್ತ ಭಾರತ ಅಭಿಯಾನ ಯೋಜನೆಯು 5 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮಾದಕ ದ್ರವ್ಯ ವ್ಯಸನದ ದುಷ್ಪಾರಿಣಾಮ ಕುರಿತು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು, ವಿಶ್ವವಿದ್ಯಾಲಯ, ಸರ್ಕಾರಿ ಕಚೇರಿಗಳಲ್ಲಿ, ವಸತಿ ನಿಲಯಗಳಲ್ಲಿ, ಸಮುದಾಯಗಳಲ್ಲಿ, ಸಾರ್ವಜನಿಕ ಸಂಸ್ಥೆಗಳಲ್ಲಿ, ಹಾಗೂ ಸಂಘ-ಸAಸ್ಥೆಗಳಲ್ಲಿ ಸಾಮೂಹಿಕ ಪ್ರತಿಜ್ಞೆ ಸ್ವೀಕರಿಸುವ ಮೂಲಕ ಅರಿವು ಮೂಡಿಸಲಾಯಿತು.
ವಾರ್ಷಿಕೋತ್ಸವ ಅಂಗವಾಗಿ ಬಳ್ಳಾರಿ ನಗರದ ಸರ್ಕಾರಿ ತಾಂತ್ರಿಕ ವಿದ್ಯಾಲಯದಲ್ಲಿ ಬುಧವಾರ ಸಾಮೂಹಿಕ ಪ್ರತಿಜ್ಞೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸುಮಾರು 1125 ವಿದ್ಯಾರ್ಥಿಗಳು ಹಾಗೂ 40 ತಾಂತ್ರಿಕ ಸಿಬ್ಬಂದಿಗಳು ಸಾಮೂಹಿಕ ಪ್ರತಿಜ್ಞೆ ಸ್ವೀಕರಿಸಿದರು.
ಹಿರಿಯ ಸಾಹಿತಿ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತೆ ಎನ್.ಡಿ.ವೆಂಕಮ್ಮ ಅವರು ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಯುವಜನತೆ ಮದ್ಯಪಾನ, ಮಾದಕ ವಸ್ತು, ಜೂಜಾಟ ಮುಂತಾದ ದುಷ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ತಮ್ಮನ್ನು ನಂಬಿಕೊAಡು ಬದುಕುತ್ತಿರುವ ಕುಟುಂಬದವರನ್ನು ಅನಾಥರನ್ನಾಗಿ ಮಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಇಂದಿನ ವಿದ್ಯಾರ್ಥಿಗಳು ಹೆಚ್ಚಾಗಿ ಇಂತಹ ದುಷ್ಚಟಗಳಿಗೆ ಒಳಗಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳದೇ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದರ ಮೂಲಕ ಉತ್ತಮ ಸಮಾಜ ನಿರ್ಮಿಸಬೇಕೆಂದು ಕರೆ ನೀಡಿದರು.
ಮನೋ ಆರೋಗ್ಯ ಕಾರ್ಯಕರ್ತ ವೆಂಕಟೇಶ್ ಮಾದಕ ದ್ರವ್ಯ ವ್ಯಸನದ ದುಷ್ಪಾರಿಣಾಮಗಳ ಕುರಿತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿ ಗೋವಿಂದಪ್ಪ ಹೆಚ್.ಎಂ., ಮೈತ್ರಿ ಸಮಗ್ರ ವ್ಯಸನ ಮುಕ್ತಿ ಹಾಗೂ ಪುನರ್ವಸತಿ ಕೇಂದ್ರದ ಮುಖ್ಯಸ್ಥ ಕುಮಾರಸ್ವಾಮಿ, ಸರ್ಕಾರಿ ತಾಂತ್ರಿಕ ಹಾಗೂ ಕಾಲೇಜಿನ ಪ್ರಾಂಶುಪಾಲ ಆನಂದ್ ಹೆಚ್.ಎಂ ಸೇರಿದಂತೆ ಜಿಲ್ಲಾ ಸೇವಾದಳದ ಮುಖ್ಯಸ್ಥರು, ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.