ಬೆಂಗಳೂರು : ನಗರದ ವಿಲ್ಸನ್ ಗಾರ್ಡನ್ ನಲ್ಲಿ ನಡೆದ ಸಿಲಿಂಡರ್ ಸ್ಫೋಟದ ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಡುಗೊಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ ಮುಬಾರಕ್ ಎಂಬ 8 ವರ್ಷದ ಬಾಲಕ ಸಾವನ್ನಪ್ಪಿದ್ದು 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಸ್ತೂರಮ್ಮ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಅಕ್ಕಪಕ್ಕದ ಮನೆಗಳಿಗೂ ಹಾನಿಯಾನಿಗೆ. ಮಗುವೊಂದು ಈ ದುರಂತದಲಲಿ ಮೃತಪಟ್ಟಿದೆ. ಗಾಯಗೊಂಡಿರುವ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಥಳದಲ್ಲಿ ಹೇಳಿಕೆ ನೀಡಿದ್ದಾರೆ.
ಸಚಿವ ರಾಮಲಿಂಗಾ ರೆಡ್ಡಿ , ನಟ ಸಾಧುಕೋಕಿಲ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಲವರು ಸಿಎಂ ಜೊತೆಗಿದ್ದರು. ಇದುವರೆಗೂ 12 ಮಂದಿಯನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ಮುಂಜಾನೆ ಇದ್ದಕ್ಕಿದ್ದಂತೆಯೇ ಧಿಡಿರನೇ ಸ್ಪೋಟದ ಸದ್ದು ಕೇಳಿಬಂದಿತ್ತು. ಸಿಲಿಂಡರ್ ಸ್ಪೋಟದಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಚಿನ್ನಯ್ಯನ ಪಾಳ್ಯದಲ್ಲಿ ಈ ಘಟನೆಯಿಂದಾಗಿ ಹಲವು ಮನೆಗಳು ಹಾನಿಗೀಡಾಗಿವೆ.
ಸುಮಾರು 40 ಮಂದಿ ವಾಸವಾಗಿದ್ದ ಮನೆಯಲ್ಲಿ ಈ ಘಟನೆ ನಡೆದಿದ್ದು, ಎಲ್ಲರೂ ಕೆಲಸಕ್ಕಾಗಿ ಹೊರಗೆ ಹೋಗಿದ್ದರು. ಕೇವಲ 10-15 ಮಂದಿ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ. ಸ್ಪೋಟದಲ್ಲಿ ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವವಿದೆ.
ಚಿಕ್ಕಪೇಟೆಯ ಶಾಸಕ ಉದಯ್ ಗರುಡಾಚಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಓರ್ವ ಮಹಿಳೆಯನ್ನು ಕೂಡಲೇ ರಕ್ಷಿಸಲಾಗಿದೆ. ಮಹಿಳೆ ಪ್ರಾಣಾಪಾಯದಿಂದ ಬಚಾವಾಗಿದ್ದಾಳೆನ್ನಲಾಗಿದೆ.
ಮೃತ ಬಾಲಕನ ಸೋದರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಘಟನೆಯ ತೀವ್ರತೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ತನ್ನ ಕಿರಿಯ ಸೋದರ ಮೃತಪಟ್ಟಿದ್ದಕ್ಕಾಗಿ ಕಣ್ಣೀರು ಸುರಿಸಿದ್ದಾನೆ. ಬಾಲಕನ ತಾಯಿಗೂ ಸಹ ತಲೆಗೆ ಪೆಟ್ಟು ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.