Friday, August 15, 2025
Google search engine

Homeಸ್ಥಳೀಯಸೆಸ್ಕ್ ವತಿಯಿಂದ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ

ಸೆಸ್ಕ್ ವತಿಯಿಂದ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ

ಉತ್ತಮ ಕಾರ್ಯನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವ

ಮೈಸೂರು: ನಿಗಮದ ಪ್ರಗತಿಗಾಗಿ ಉತ್ತಮ ಕೆಲಸ ಮಾಡಿರುವ ಸಿಬ್ಬಂದಿಗೆ ಗೌರವ ಸಲ್ಲಿಸುವ ಜತೆಗೆ ಉತ್ತಮವಾಗಿ ಕೆಲಸ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಕೆ ಹಾಗೂ ಗ್ರಾಹಕರ ಅನುಕೂಲಕ್ಕಾಗಿ ಪಿಒಎಸ್‌ ಸೌಲಭ್ಯ ಉದ್ಘಾಟನೆ ಮಾಡುವ ಮೂಲಕ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ(ಸೆಸ್ಕ್‌)ದಿಂದ 79ನೇ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. 

ವಿಜಯನಗರ ೨ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. 

ಅಧಿಕಾರಿ, ಸಿಬ್ಬಂದಿಗೆ ಗೌರವ:
ಇದೇ ಸಂದರ್ಭದಲ್ಲಿ ನಿಗಮ ವ್ಯಾಪ್ತಿಯ ಐದು ಜಿಲ್ಲೆಗಳಲ್ಲಿ ವಿದ್ಯುತ್‌ ಮಾರ್ಗಗಳ ನಿರ್ವಹಣಾ ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ ಕಿರಿಯ ಇಂಜಿನಿಯರ್‌ಗಳು, ಪವರ್‌ ಮ್ಯಾನ್‌ಗಳು, ಕುಸುಮ್‌-ಸಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಶ್ರಮಿಸಿದ ಕಿರಿಯ ಇಂಜಿನಿಯರ್‌, ಸಹಾಯಕ ಇಂಜಿನಿಯರ್‌ಗಳು ಮತ್ತು ಹೆಚ್ಚುವರಿ ಜಿಎಸ್‌ಟಿ ತೆರಿಗೆಯನ್ನು ತಡೆಯುವಲ್ಲಿ ಕಾನೂನಾತ್ಮಕವಾಗಿ ಹೋರಾಟ ನಡೆಸಿದ ತೆರಿಗೆ ಶಾಖೆಯ ಅಧಿಕಾರಿಗಳು ಮತ್ತು ಎಂಟಿ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗೆ ಬೆಳ್ಳಿ ಪದಕ ಹಾಗೂ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಲಾಯಿತು. 

ಈ ಸಂದರ್ಭದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಆಡಳಿತ ಮತ್ತು ಮಾನವ ಸಂಪನ್ಮೂಲ ಶಾಖೆಯ ಪ್ರಧಾನ ವ್ಯವಸ್ಥಾಪಕಿ ಡಾ.ಬಿ.ಆರ್.ರೂಪ, ಆಂತರಿಕ ಲೆಕ್ಕ ಪರಿಶೋಧನೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕಿ ಲಿಂಗರಾಜಮ್ಮ, ಸೆಸ್ಕ್ ಜಾಗೃತ ದಳದ ಪೊಲೀಸ್ ನಿರೀಕ್ಷಕ ರಾಮಕುಮಾರ್ ಹಾಗೂ ವಿಜಯಲಕ್ಷ್ಮಿ ಇತರರಿದ್ದರು.

ವಿದ್ಯುತ್‌ ಬಿಲ್‌ ಸಂಗ್ರಹಕ್ಕೆ ಪಿಒಎಸ್‌ ಸೌಲಭ್ಯ ವಿದ್ಯುತ್ ಬಿಲ್ ಸಂಗ್ರಹಣೆಯನ್ನು ಸರಳೀಕರಿಸಲು ಪಾಯಿಂಟ್-ಆಫ್-ಸೇಲ್ (ಪಿಒಎಸ್‌) ಪಾವತಿ ಸೌಲಭ್ಯವನ್ನು ಅನುಷ್ಠಾನಗೊಳಿಸಿದೆ. ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಸೆಸ್ಕ್‌ ತನ್ನ ಪಿಒಎಸ್‌ ಯಂತ್ರದ ಮೂಲಕ ವಿದ್ಯುತ್ ಬಿಲ್ ಸಂಗ್ರಹಣೆ ಯೋಜನೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಚಾಲನೆ ನೀಡಿದರು

ಸೆಸ್ಕ್‌ ಅನುಷ್ಠಾನಗೊಳಿಸಿರುವ ಪಿಒಎಸ್‌ ಯೋಜನೆ ಗ್ರಾಹಕರಿಗೆ ಹೆಚ್ಚಿನ ಅನುಕೂಲವನ್ನು ದೊರೆಯಲಿದೆ. ಗ್ರಾಹಕರು ವಿದ್ಯುತ್ ಬಿಲ್ ಪಾವತಿಸಲು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ ಕ್ಯೂ-ಆರ್‌ ಕೋಡ್‌ ಹಾಗೂ ನಗದು ರೂಪದಲ್ಲಿ ವಿದ್ಯುತ್‌ ಬಿಲ್‌ ಪಾವತಿಸಬಹುದು. ಗ್ರಾಹಕರು ತಮ್ಮ ಮನೆ ಬಾಗಿಲಲ್ಲಿ ಅಥವಾ ಸೆಸ್ಕ್‌ ನಗದು ಪಾವತಿ ಕೌಂಟರ್‌ಗಳಲ್ಲಿಯೂ ಬಿಲ್ ಪಾವತಿಸಬಹುದಾಗಿದೆ.

ಕೆನರಾ ಬ್ಯಾಂಕ್‌ನ ಸಹಕಾರದೊಂದಿಗೆ ಈ ಯೋಜನೆ ಅನುಷ್ಟಾನಕ್ಕೆ ತರಲಾಗಿದ್ದು, ಕೆನರಾ ಬ್ಯಾಂಕ್‌ ವತಿಯಿಂದ 500 ಪಿಒಎಸ್ ಯಂತ್ರಗಳನ್ನು ಸೆಸ್ಕ್‌ಗೆ ಉಚಿತವಾಗಿ ನೀಡುವ ಜತೆಗೆ ಪಿಒಎಸ್‌ ಯಂತ್ರದ ಬಳಕೆಯ ತರಬೇತಿ ನೀಡಲಾಗಿದೆ. ಈ ಯೋಜನೆಯ ಮೂಲಕ ವಿದ್ಯುತ್ ಬಿಲ್ ಸಂಗ್ರಹವನ್ನು ಸುಲಭಗೊಳಿಸಿ, ಸೆಸ್ಕ್‌ ಅಧಿಕಾರಿಗಳ ಕಾರ್ಯಕ್ಷಮತೆ ಹೆಚ್ಚಿಸುವುದಲ್ಲದೆ, ಡಿಜಿಟಲ್ ಇಂಡಿಯಾ ಉದ್ದೇಶದೊಂದಿಗೆ ಗ್ರಾಹಕರಿಗೆ ಬಿಲ್‌ ಪಾವತಿ ಸೌಲಭ್ಯ ಒದಗಿಸುವುದರಲ್ಲಿ ಸೆಸ್ಕ್‌ ಮಹತ್ವದ ಹೆಜ್ಜೆ ಇರಿಸಿದೆ.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಚಂದನ್ ಕುಮಾರ್, ಮೈಸೂರು ವಲಯದ ಪ್ರಧಾನ ವ್ಯವಸ್ಥಾಪಕ ಎಸ್‌. ರಾಜಶೇಖರ್‌, ಪೇ-ಸ್ವಿಫ್‌ ಸಂಸ್ಥೆಯ ಕ್ಲಸ್ಟರ್ ವ್ಯವಸ್ಥಾಪಕ ಶ್ರೀನಿವಾಸ್ ಮೂರ್ತಿ, ಸಂಪರ್ಕ ವಿಭಾಗದ ವ್ಯವಸ್ಥಾಪಕ ನರೇಶ್‌ ಬಾಬು ಇತರರಿದ್ದರು. 79ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಿದ್ದು, ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಿ ನೀಡಿ ಸ್ವಾತಂತ್ರ್ಯ ಕಲ್ಪಿಸಿದ ಪ್ರತಿಯೊಬ್ಬ ಸ್ವಾತಂತ್ರ್ಯ ಹೋರಾಟಗಾರರನ್ನು ನಾವೆಲ್ಲ ನೆನೆಯಬೇಕಿದೆ. ಭಾರತ ಇಂದು ಆರ್ಥಿಕತೆ, ತಂತ್ರಜ್ಞಾನ, ವೈಜ್ಞಾನಿಕ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದು, ಕರ್ನಾಟಕ ಕೂಡ ಎಲ್ಲ ಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತಿದೆ. ಈ ನಿಟ್ಟಿನಲ್ಲಿ ಸೆಸ್ಕ್ ಸಿಬ್ಬಂದಿ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸೋಣ.”

ಕೆ.ಎಂ. ಮುನಿಗೋಪಾಲ್ ರಾಜು,
ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್

RELATED ARTICLES
- Advertisment -
Google search engine

Most Popular