ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದೆ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನಿಧನದಿಂದಾಗಿ ಸಮಾಜಕ್ಕೆ ಮತ್ತು ಭಕ್ತರಿಗೆ ನೋವುಂಟಾಗಿದೆ ಎಂದು ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶಿವರಾಮ್, ಉಪಾಧ್ಯಕ್ಷ ಹೊಸೂರು ಎ.ಕುಚೇಲ್, ನಿರ್ದೇಶಕ ಸಾಲಿಗ್ರಾಮ ಪ್ರಕಾಶ್ ಹೇಳಿದ್ದಾರೆ.
ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಸದಾ ಸಮಾಜ ಸೇವೆ, ರ‍್ಮ ಕೈಂರ‍್ಯದಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದರು. ಕೆಂಗೇರಿಯಲ್ಲಿ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ, ಧರ‍್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಶ್ರೀಗಳು ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ ನೀಡಲಿ ಎಂದು ಅವರು ಕೋರಿದ್ದಾರೆ.