Monday, August 18, 2025
Google search engine

Homeರಾಜ್ಯಬೆಂಗಳೂರು ಹೆಬ್ಬಾಳದ ಹೊಸ ಮೇಲ್ಸೇತುವೆ ಲೋಕಾರ್ಪಣೆ

ಬೆಂಗಳೂರು ಹೆಬ್ಬಾಳದ ಹೊಸ ಮೇಲ್ಸೇತುವೆ ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತ ಸಂಪರ್ಕಿಸುವ ನೂತನ ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು.

ಹೆಬ್ಬಾಳ ಮಾರ್ಗವಾಗಿ ಸಂಚರಿಸುವವರಿಗೆ ಈ ಮೇಲ್ಸೇತುವೆ ವಾಹ ದಟ್ಟಣೆಯನ್ನು ಗಮನೀಯ ಪ್ರಮಾಣದಲಲಿ ಕಡಿಮೆ ಮಾಡಲಿದೆ. 700 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ರೂ. 80 ಕೋಟಿ ವೆಚ್ಚದಲ್ಲಿ ಕೇವಲ 7 ತಿಂಗಳಲ್ಲಿ ನಿರ್ಮಿಸಲಾಗಿರುವುದು ಈ ಸೇತುವೆಯ ಮತ್ತೊಂದು ವಿಶೇಷ. ಈ ಮೇಲ್ಸೇತುವೆ ಸಂಚಾರ ದಟ್ಟಣೆಯನ್ನು ಶೇ 30ರಷ್ಟು ಕಡಿಮೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಬೈರತಿ ಸುರೇಶ್, ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಮಾಜಿ ಸಂಸದೆ ರಮ್ಯಾ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದೇ ವೇಳೆ ಶಿವಕುಮಾರ್‌ ಅವರು ತಮ್ಮ ಹಳೆಯ ಯೆಜ್ಡಿ ರೋಡ್‌ ಕಿಂಗ್‌ ಬೈಕ್‌ ಚಲಾಯಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನನಗೆ ನನ್ನ ಕಾಲೇಜು ದಿನಗಳು ನೆನಪಾದವು ಎಂದರು.

RELATED ARTICLES
- Advertisment -
Google search engine

Most Popular