ರಾಮನಗರ: ಚನ್ನಪಟ್ಟಣ ತಾಲ್ಲೂಕು ಪಂಚಾಯತ್, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಾಳೆ ಆ. 20ರ ಬುಧವಾರ ಬೆಳಿಗ್ಗೆ 10.30ಕ್ಕೆ ಚನ್ನಪಟ್ಟಣದ ಶತಮಾನೋತ್ಸವ ಭವನದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾರಿಗೆ, ಮುಜರಾಯಿ ಇಲಾಖೆ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಪಿ. ಯೋಗೇಶ್ವರ್ ಅವರು ಅಧ್ಯಕ್ಷತೆ ವಹಿಸುವರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಸಿ.ಎನ್. ಮಂಜುನಾಥ್, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮತ್ತು ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಸಿ. ಬಾಲಕೃಷ್ಣ, ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ, ವಿಧಾನ ಪರಿಷತ್ ಶಾಸಕರಾದ ಎಸ್. ಪುಟ್ಟಣ್ಣ, ಎಸ್. ರವಿ, ಸುಧಾಮ್ ದಾಸ್, ರಾಮೋಜಿ ಗೌಡ, ಬಿಎಂಐಸಿಪಿಎ ಪ್ರಾಧಿಕಾರದ ಅಧ್ಯಕ್ಷರಾದ ರಘುನಂದನ್ ರಾಮಣ್ಣ, ಚನ್ನಪಟ್ಟಣ ನಗರಸಭೆ ಅಧ್ಯಕ್ಷರಾದ ವಾಸೀಲ್ ಅಲಿ ಖಾನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.