ಮಂಗಳೂರು (ದಕ್ಷಿಣ ಕನ್ನಡ) : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿರುವುದನ್ನು ಖಂಡಿಸಿ ಹಾಗೂ ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿರುವ ಕೆಲ ಯೂಟ್ಯೂಬರ್ ಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಾರಾವಿ ಗ್ರಾಮದ ಗ್ರಾಮಸ್ಥರು ಹಾಗೂ ಭಕ್ತರು ಇಂದು ಮಂಗಳೂರಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಇವರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ಈ ಘಟನೆಯಿಂದ ನಮಗೆ ತೀವ್ರವಾದ ನೋವುಂಟಾಗಿದೆ ಎಂದು ನಿಯೋಗ ಮನವಿಯಲ್ಲಿ ತಿಳಿಸಿದೆ. ಈ ನಿಯೋಗದಲ್ಲಿ ಸುಮಾರು 30 ಮಂದಿ ಇದ್ದರು.