Thursday, August 21, 2025
Google search engine

Homeರಾಜ್ಯವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ಗೆ ರಕ್ಷಣಾ ಇಲಾಖೆ ಒಪ್ಪಿಗೆ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ಗೆ ರಕ್ಷಣಾ ಇಲಾಖೆ ಒಪ್ಪಿಗೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ ನೀಡಿದ್ದು, ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕರ್ನಾಟಕ ಸರ್ಕಾರ, ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.

ಮೈಸೂರು ದಸರಾಗೆ ತನ್ನದೇ ಆದ ಇತಿಹಾಸ ಇದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಜನರು ಬರುತ್ತಾರೆ. ಶ್ರದ್ಧಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular