ಮಂಗಳೂರು (ದಕ್ಷಿಣ ಕನ್ನಡ) : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ನೇತೃತ್ವದಲ್ಲಿ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ರೋಗಿಗಳ ಜೊತೆಗಾರರಿಗೆ ಊಟವನ್ನು ವಿತರಿಸಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸುನಿತ್ ಡೇಸಾ, ದೀಕ್ಷಿತ್ ಅತ್ತಾವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೌಹಾನ್ ಎಸ್‌ಕೆ, ಮಂಗಳೂರು ದಕ್ಷಿಣ ವಿಧಾನಸಭಾ ಅಧ್ಯಕ್ಷ ಆಸಿಫ್ ಬಜಾಲ್, ಬ್ಲಾಕ್ ಅಧ್ಯಕ್ಷರುಗಳಾದ ವೆಲ್ವಿನ್ ಜೈಸನ್, ಪ್ರಥ್ವಿರಾಜ್ ಪೂಜಾರಿ, ಫಯಾಝ್ ಅಮ್ಮೆಮ್ಮಾರ್, ಅನ್ಸಾರುದ್ದೀನ್ ಸಾಲ್ಮರ, ಅವ್ಲೋನ್ ಹಾಗೂ ಎಂ ಫ್ರೆಂಡ್ಸ್ ಸದಸ್ಯರಾದ ಮುಹಮ್ಮದ್ ಅಲಿ ಕಮ್ಮರಡಿ, ಮುಹಮ್ಮದ್ ಕುಕ್ಕುವಳ್ಳಿ ಉಪಸ್ಥಿತರಿದ್ದರು.