ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ವಿವಿಧ ಭಾಗಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 3 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಆಗಸ್ಟ್ 25 ಹಾಗೂ 26 ರಂದು ಎಲ್ಲಿ ಮಳೆ: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಹಾಗೂ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.ಬೆಂಗಳೂರು ಮತ್ತು ಅದರ ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಇಲ್ಲಿ ಹಗುರವಾಗಿ ಅಥವಾ ಗುಡುಗು-ಮಿಂಚಿನೊಂದಿಗೆ ಮಳೆ ಆಗಬಹುದೆಂದು ನಿರೀಕ್ಷಿಸಲಾಗಿದೆ.
ಹಾಗೆಯೇ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆಗಸ್ಟ್ 27ರ ವರೆಗೆ ಒಣಹವೆ ಮುಂದುವರೆಯಲಿದೆ. ಆಗಸ್ಟ್ 27ರಿಂದ ಮತ್ತೆ 2 ಮಳೆ ಆರಂಭವಾಗಲಿದೆ. ಈ ಅವಧಿಯಲ್ಲಿ ಕೆಲ ಆಯ್ದ ಪ್ರದೇಶಗಳಲ್ಲಿ ಮಾತ್ರ ಸಾಧಾರಣ ಮಳೆ ಸುರಿಯಲಿದೆ.
ಆಗಸ್ಟ್ 28ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು,ಭಾರೀ ಮಳೆಯಿಂದಾಗಿ ರಾಜ್ಯ ಹಲವು ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಅಲ್ಲದೆ, ಮತ್ತೊಂದೆಡೆ ಪ್ರಮುಖ ಜಲಾಶಯಗಳು ಸಹ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗಳಿಗೆ ಹರಿಸಲಾಗುತ್ತಿದೆ. ಇದರಿಂದ ನದಿ ತೀರದ ಪ್ರದೇಶಗಳ ಜನರಿಗೆ ನಡುಕ ಶುರುವಾಗಿದೆ. ಈಗಾಗಲೇ ಹಲವೆಡೆ ನದಿ ತೀರಗಳ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಜಿಲ್ಲಾಡಳಿತಗಳು ಸೂಚನೆ ನೀಡಿವೆ.