Monday, August 25, 2025
Google search engine

Homeರಾಜ್ಯಗಣೇಶ ಚತುರ್ಥಿ ಹಿನ್ನಲೆ: ಖಾಸಗಿ ಬಸ್ ದರ ಗಗನಕ್ಕೇರಿಕೆ, ಸರ್ಕಾರದಿಂದ ಹೆಚ್ಚುವರಿ ಸಾರಿಗೆ ವ್ಯವಸ್ಥೆ

ಗಣೇಶ ಚತುರ್ಥಿ ಹಿನ್ನಲೆ: ಖಾಸಗಿ ಬಸ್ ದರ ಗಗನಕ್ಕೇರಿಕೆ, ಸರ್ಕಾರದಿಂದ ಹೆಚ್ಚುವರಿ ಸಾರಿಗೆ ವ್ಯವಸ್ಥೆ

ಬೆಂಗಳೂರು : ಪ್ರಮುಖ ಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿಯ ಹಿನ್ನಲೆ ಅದೆಷ್ಟೋ ಜನ ಮನೆಗೆ ಹೋಗಲು ಪ್ಲಾನ್ ಮಾಡುತ್ತಿದ್ದಾರೆ. ಈ ಹಿನ್ನಲೆ ಸರ್ಕಾರ ಹೆಚ್ಚುವರಿ ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಇನ್ನೊಂದೆಡೆ ಬೆಂಗಳೂರಿನಿಂದ ಊರಿಗೆ ಹೋಗುವವರಿಗೆ ಖಾಸಗಿ ಬಸ್ ಗಳು ಬೆಲೆ ಏರಿಕೆ ಮಾಡಲಾಗಿದ್ದು, ಈ ಮೂಲಕ ಪ್ರಯಾಣಿಕರಿಗೆ ಶಾಕ್ ನೀಡಿದೆ.

ಗಣೇಶ ಚತುರ್ಥಿಯ ಹಿನ್ನಲೆ ಜನರೆಲ್ಲ ಕುಟುಂಬ ಸಮೇತ ಊರಿಗೆ ಮರಳಲು ಪ್ಲಾನ್ ಮಾಡಿಕೊಂಡಿದ್ದರು. ಇದೀಗ ಪ್ಲಾನ್ ಹಾಕಿಕೊಂಡವರಿಗೆ ಖಾಸಗಿ ಬಸ್ ಗಳು ಬಿಗ್ ಶಾಕ್ ನೀಡಿದ್ದು, ಊರಿಗೆ ಹೋಗೋದೇ ಬೇಡ ಎನ್ನುವಂತಹ ಪರಿಸ್ಥಿತಿ ತಂದಿದೆ.

ಬೆಂಗಳೂರು-ಧರ್ಮಸ್ಥಳ ಪ್ರಯಾಣ ದರ ಸಾಮಾನ್ಯವಾಗಿ 600–1,100 ರೂ ಇದ್ದದ್ದು, ಇದೀಗ 1,499–2,600ಕ್ಕೆ ಏರಿದೆ. ಬೆಂಗಳೂರು-ಮೈಸೂರು ಪ್ರಯಾಣ ದರ ಸಾಮಾನ್ಯವಾಗಿ 199–2,000 ರೂ ಇದ್ದದ್ದು, ಇದೀಗ 300–5,000 ಆಗಿದೆ. ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಸಾಮಾನ್ಯ ದಿನಗಳಲ್ಲಿ 609–1,800 ಟಿಕೆಟ್‌ ಬೆಲೆ ಇದ್ದು, ಇದೀಗ 1,200–9,999ಕ್ಕೆ ಹೆಚ್ಚಿಸಲಾಗಿದೆ.

ಅದರಲ್ಲೂ ಮಂಗಳೂರು, ಉಡುಪಿ, ಕಾರ್ಕಳ, ಚಿಕ್ಕಮಗಳೂರು,  ಕೊಡಗು, ಶಿವಮೊಗ್ಗ, ಧಾರವಾಡ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಟಿಕೆಟ್ ದರ ದುಪ್ಪಟ್ಟು ಮಾಡಲಾಗಿದೆ. ಸದ್ಯ ಬಸ್ ಮಾಲೀಕರ ಈ ನಿರ್ಧಾರದಿಂದ ಪ್ರಯಾಣಿಕರು ಕಂಗಾಲಾಗಿದ್ದಾರೆ.

ಇನ್ನೊಂದೆಡೆ ಆಗಸ್ಟ್ 25 ರಿಂದ 31 ರವರೆಗೆ ಕೆಎಸ್‌ಆರ್‌ಟಿಸಿ 1,500 ಹೆಚ್ಚುವರಿ ಬಸ್‌ಗಳನ್ನು ನಿಯೋಜನೆ ಮಾಡಲಾಗಿದ್ದು, ಬೆಂಗಳೂರಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳು ಮತ್ತು ನೆರೆಯ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಮತ್ತು ಕೇರಳಕ್ಕೆ ಬಸ್​ ಸೇವೆ ಒದಗಿಸಲಾಗಿದೆ.

ಖಾಸಗಿ ಬಸ್ ಗಳ ಟಿಕೆಟ್ ದರ ಏರಿಕೆಯ ಹಿನ್ನಲೆ ಸಾರ್ವಜನಿಕರ ಬೇಡಿಕೆ ಮೇರೆಗೆ ಬೆಂಗಳೂರು, ಮಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು ಕಾರ್ಯಾಚರಣೆ ಆರಂಭವಾಗಲಿದೆ. ಈ ಬಗ್ಗೆ ನೈಋತ್ಯ ರೈಲ್ವೆಯು ಸಾಮಾಜಿಕ ಮಾಧ್ಯಮ ಎಕ್ಸ್​​ ಮೂಲಕ ಮಾಹಿತಿ ನೀಡಿದೆ. 

ಬೆಂಗಳೂರಿನಿಂದ ಮಡಗಾಂವ್ ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದ್ದು, ಈ ಮೂಲಕ ಬೆಂಗಳೂರಿನಿಂದ ರೈಲು ಆಗಸ್ಟ್​ 26 ರಂದು ಎಸ್​​ಎಮ್​ವಿಟಿ ಬೆಂಗಳೂರಿನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ನಸುಕಿನ ಜಾವ 5:30ಕ್ಕೆ ಮಡಗಾಂವ್​ ಗೆ ತಲುಪಲಿದೆ.

ಇನ್ನು ಇದೇ ರೈಲು ಆಗಸ್ಟ್​ 27 ರಂದು ಬೆಳಿಗ್ಗೆ 6:30ಕ್ಕೆ ಮಡಗಾಂವ್​ನಿಂದ ಹೊರಟು ಅದೇ ದಿನ ರಾತ್ರಿ 11:40 ಎಸ್​ಎಮ್​ವಿಟಿ ಬೆಂಗಳೂರು ತಲುಪಲಿದೆ.  ಬೆಂಗಳೂರು-ಬೀದರ್​ ರೈಲು ಆಗಸ್ಟ್​ 26 ರಂದು ರಾತ್ರಿ 9:15ಕ್ಕೆ ಎಸ್​ಎಮ್​ವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 11:30ಕ್ಕೆ ಬೀದರ್ ತಲುಪಲಿದೆ. ಇದೇ ರೈಲು ವಾಪಸ್​ 06550: ಬೀದರ್​ನಿಂದ ಆಗಸ್ಟ್​ 27 ರಂದು ಮಧ್ಯಾಹ್ನ 2:30ಕ್ಕೆ ಹೊರಟು ಮರುದಿನ ನಸುಕಿನ ಜಾವ 4:30ಕ್ಕೆ ಎಸ್​ಎಮ್​ವಿಟಿ ಬೆಂಗಳೂರು ತಲುಪಲಿದೆ.

ಇನ್ನುಳಿದಂತೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಮಂಗಳೂರಿಗೆ ನಾಲ್ಕು ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ಊರಿಗೆ ಹೋಗಲು ಸಹಾಯಕವಾಗಲಿದೆ.

RELATED ARTICLES
- Advertisment -
Google search engine

Most Popular