Monday, August 25, 2025
Google search engine

Homeರಾಜ್ಯಅರ್ಜಿ ಆಹ್ವಾನ

ಅರ್ಜಿ ಆಹ್ವಾನ

ರಾಮನಗರ: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿ (ರಾಮನಗರ, ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿ ತಾಲ್ಲೂಕು) ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಿದ್ಯಾರ್ಥಿನಿಲಯಗಳಲ್ಲಿ ಖಾಲಿಯಿರುವ ಸೀಟುಗಳಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ (ಪಿ.ಯು.ಸಿ ಹಾಗೂ ಸಮಾನಾಂತರ ಕೋರ್ಸು ಮತ್ತು ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಮಾತ್ರ) ವ್ಯಾಸಂಗ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳಿಂದ ಪ್ರವೇಶಾತಿಗಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ. 75 ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಪ್ರವೇಶವನ್ನು ಕಲ್ಪಿಸಲಾಗುತ್ತದೆ. ಆನ್‌ಲೈನ್ ಮೂಲಕ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ  https://shp.karnataka.gov.in ಮೂಲಕ ಅರ್ಜಿಯನ್ನು ಸೆಪ್ಟೆಂಬರ್ 15ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು, ರಾಮನಗರ ಉಪ ವಿಭಾಗ ದೂ. ಸಂಖ್ಯೆ: 8660331315, ತಾಲ್ಲೂಕು ಮಾಹಿತಿ ಕೇಂದ್ರಗಳ ಸಿಬ್ಬಂದಿಗಳ ದೂ. ಸಂಖ್ಯೆ: 9886558821,  9880297132, ಜಿಲ್ಲಾ ಕಚೇರಿ ದೂ.ಸಂಖ್ಯೆ: 080-27271104 ಅಥವಾ ಜಿಲ್ಲಾ ಕಚೇರಿಗೆ ಖುದ್ದು ಭೇಟಿ  ಮಾಹಿತಿ  ಪಡೆಯುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular