Monday, August 25, 2025
Google search engine

Homeರಾಜ್ಯಎಸ್‌ಸಿ-ಎಸ್‌ಟಿ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನದೊಳಗೆ ಆರೋಪಪಟ್ಟಿ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಎಸ್‌ಸಿ-ಎಸ್‌ಟಿ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನದೊಳಗೆ ಆರೋಪಪಟ್ಟಿ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ 6 ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.100 ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಆರ್.ಬಿ.ತಿಮ್ಮಾಪುರ  ಸೇರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

“ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ.  ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದರು.  ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಖಡಕ್‌ ಸೂಚನೆ ನೀಡಿದರು

RELATED ARTICLES
- Advertisment -
Google search engine

Most Popular