Thursday, August 28, 2025
Google search engine

Homeರಾಜ್ಯಸುದ್ದಿಜಾಲಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ (ಮೆಟ್ರಿಕ್ ನಂತರದ ಕೋರ್ಸ್ಗಳ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ ಲಿಂಕ್ https://shp.karnataka.gov.in ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 15.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಬಳ್ಳಾರಿ ವಿಭಾಗ ತಾಲ್ಲೂಕು ವಿಸ್ತರಣಾಧಿಕಾರಿಗಳ ಮೊ.8746818180 ಮತ್ತು ಬಳ್ಳಾರಿ ತಾಲ್ಲೂಕು ಮಾಹಿತಿ ಕೇಂದ್ರ ಮೊ.8310321101, ಸಂಡೂರು ತಾಲ್ಲೂಕು ಮಾಹಿತಿ ಕೇಂದ್ರ ಮೊ.9036925966/8660575061, ಸಿರುಗುಪ್ಪ ತಾಲ್ಲೂಕು ಮಾಹಿತಿ ಕೇಂದ್ರ ಮೊ.9148889975 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular