ಮಂಗಳೂರು (ದಕ್ಷಿಣ ಕನ್ನಡ): ಕೇರಳ-ಕರ್ನಾಟಕದ ಗಡಿಭಾಗವಾದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದ್ದು, ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿರುವ ಮಾಹಿತಿಯಿದೆ.
ಬಸ್ಸು ಕಾಸರಗೋಡಿನಿಂದ ಮಂಗಳೂರು ಬಸ್ ನಿಲ್ದಾಣಕ್ಕೆ ಬರುತ್ತಿತ್ತು. ಅಪಘಾತದ ರಭಸಕ್ಕೆ ಕಾಸರಗೋಡು ಕಡೆಗೆ ಮುಖಮಾಡಿ ನಿಂತಿದೆ. ಈ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.