ಮಂಡ್ಯ : ಮಂಡ್ಯದಲ್ಲಿ ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಧರ್ಮಸ್ಥಳ ವಿರುದ್ಧ ನಿರಂತರ ಅಪಪ್ರಚಾರ ನಡೆಯುತ್ತಿದೆ. 800ವರ್ಷ ಇತಿಹಾಸವಿರುವ ಶ್ರೀಕ್ಷೇತ್ರದ ವಿರುದ್ಧ ಪಿತೂರಿ ನಡೆಸಿದ್ದಾರೆ. ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಧರ್ಮಸ್ಥಳದ ಭಕ್ತರು ಸಹ ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು ಎಂದರು.
ಧರ್ಮಸ್ಥಳ ವಿಚಾರದಲ್ಲಿ ಯಾವ ಆಧಾರದಲ್ಲಿ SIT ರಚನೆಗೆ ನಿರ್ಧಾರ ಮಾಡಿತು? ಈ ಪ್ರಶ್ನೆ ಲಕ್ಷಾಂತರ ಭಕ್ತರಲ್ಲಿ ಮೂಡಿದೆ. ಒಬ್ಬೊರೋ, ಇಬ್ಬರೋ ದೂರು ಕೊಟ್ಟ ತಕ್ಷಣ SIT ರಚನೆ ಮಾಡಿದ್ದಾರೆ. ಚಿನ್ನಯ್ಯ ಎಂಬ ವ್ಯಕ್ತಿ ಬುರುಡೆ ತಂದು ಧರ್ಮಸ್ಥಳದಲ್ಲಿ ಮಾಸ್ ಮರ್ಡರ್ ನಡೆದಿದೆ ಎಂದು ಬಿಂಬಿಸಿದ್ರು. ಮೊದಲು FSL ವರದಿ ಪಡೆದ ಬಳಿಕ ವಿಷಯ ಗಂಭೀರತೆ ಸರ್ಕಾರ ಅರಿಯಬೇಕಿತ್ತು. ಸಿದ್ದರಾಮಯ್ಯ ಹೆಸರಲ್ಲಿ SIT ಆಗಿದೆ. ಧರ್ಮಾಧಿಕಾರಿಗಳು ಮತ್ತು ಅವರ ಕುಟುಂಬಕ್ಕೆ ನೈತಿಕ ಬೆಂಬಲ ಸೂಚಿಸಬೇಕಿದೆ. ಯಾವುದೇ ರಾಜಕೀಯ ಬೆರೆಸದೆ ಧರ್ಮಸ್ಥಳ ಸತ್ಯ ಯಾತ್ರೆ ನಡೆಯಲಿದೆ.
ಧರ್ಮ ರಕ್ಷಣೆ ಉದ್ದೇಶದಿಂದ ಯಾತ್ರೆ ಆಯೋಜನೆ. ಧರ್ಮಸ್ಥಳದಿಂದ ಸಾಕಷ್ಟು ಸಮಾಜ ಮುಖಿ ಕೆಲಸಗಳು ನಡೆದಿವೆ. ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ವಿರೋಧಿಸಿ ಯಾತ್ರೆ ಕೈಗೊಂಡಿದ್ದೇವೆ. SIT ಸಮರ್ಥವಾಗಿ ತನಿಖೆ ನಡೆಸಿದ್ರೆ ಸ್ವಾಗತ ಕೋರುತ್ತಿದ್ದೆವು. ರಾಜ್ಯದ ಜನರಿಗೆ SIT ತನಿಖೆ ಮೇಲೆ ನಿರೀಕ್ಷೆಗಳಿಲ್ಲ. NIA ತನಿಖೆಗೆ ವಹಿಸಿದ್ರೆ ಷಡ್ಯಂತ್ರ ಬಯಲಾಗಲಿದೆ. ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು NIA ತನಿಖೆ ಅವಶ್ಯಕ. ಇದೆ ಸಂದರ್ಭದಲ್ಲಿ ಧರ್ಮಸ್ಥಳ ಪ್ರಕರಣವನ್ನು NIAಗೆ ವಹಿಸಲು ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.
ಈ ಪ್ರಕರಣದಲ್ಲಿ ಅಂತರಾಷ್ಟ್ರೀಯ ಮಟ್ಟದಿಂದ ಫಂಡ್ಡಿಂಗ್ ಆಗಿದೆ.ಆ ಕಾರಣದಿಂದ ಈ ಪ್ರಕರಣವನ್ನು NIA ವಹಿಸಿಬೇಕು. ಆಗ ಮಾತ್ರ ಈ ಪ್ರಕರಣದ ಸತ್ಯ ಹೊರಬರುಲು ಸಾಧ್ಯ ಆಗುತ್ತೆ. ನಮ್ಮ BJP ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ಧರ್ಮಸ್ಥಳ ಹೋರಾಟದಲ್ಲಿ ಈ ಬಗ್ಗೆ ಯಾವುದೇ ತಪ್ಪು ಹುಡುಕಬೇಡಿ. ಈ ಹೋರಾಟದಲ್ಲಿ ಯಾವುದೇ ರಾಜಕಾರಣ ಇಲ್ಲ ಎಂದರು.