ರಾಯಚೂರು: ತಾಲೂಕಿನ ಕಾಡ್ಲೂರು ಗ್ರಾಮದ ಕೃಷ್ಙಾ ನದಿ ತೀರದ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಶ್ರೀಪ್ರಾಣದೇವರ ದೇವಸ್ಥಾನ ಜಲಾವೃತವಾಗಿದೆ.
ಕೃಷ್ಣಾನದಿಗೆ ನಾರಾಯಣಪೂರು ಜಲಾಶಯದಿಂದ 1.5ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನಲೆಯಲ್ಲಿ ನದಿಯಲ್ಲಿ ನೀರಿನ ಪ್ರಮಾಣ ಅಧಿಕವಾಗಿರುವುದರಿಂದ ದೇವಸ್ಥಾನ ಜಲಾವೃತವಾಗಿದೆ.
ನಿರಂತರ ಮಳೆಯಿಂದ ಜಲಾಶಯದಲ್ಲಿ ಒಳ ಹರಿವು ಹೆಚ್ಚಳದಿಂದ ನದಿಗೆ ನೀರು ಬಿಟ್ಟಿದ್ದರಿಂದ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಳೆ ಮುಂದುವರೆದಲ್ಲಿ ದೇವಸ್ಥಾನ ಮುಳುಗಡೆಯಾಗುವ ಸಾಧ್ಯತೆಯಿದೆ.
ಅಧಿಕ ಮಾಸ ಹಿನ್ನೆಲೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಇದರಿಂದ ಅನಾನುಕೂಲವಾಗಿದೆ.