ಅಫ್ಘಾನಿಸ್ತಾನ: ಆಗಸ್ಟ್ 31ರ ಭಾನುವಾರ ರಾತ್ರಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 622 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಭೂಕಂಪ ರಾತ್ರಿ 11:47ಕ್ಕೆ ಸಂಭವಿಸಿದ್ದು, ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣವಾಗಿ ನೆಲಸಮವಾಗಿವೆ. ಒಂದೇ ಹಳ್ಳಿಯಲ್ಲಿ 30 ಮಂದಿ ಮೃತಪಟ್ಟಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಕ್ಷಣಾ ಕಾರ್ಯಾಚರಣೆ ನಡೆದಿದೆ, ಆದರೆ ಇನ್ನೂ ಅಂತಾರಾಷ್ಟ್ರೀಯ ಬೆಂಬಲ ದೊರಕಿಲ್ಲ. ಪಾಕಿಸ್ತಾನ ಮತ್ತು ಉತ್ತರ ಭಾರತದ ಕೆಲವು ಪ್ರದೇಶಗಳಲ್ಲಿಯೂ ಕಂಪನ ಅನುಭವವಾಗಿದ್ದು, ದೆಹಲಿಯವರು ಭಯದಿಂದ ಕಟ್ಟಡದಿಂದ ಹೊರ ಓಡಿದ್ದಾರೆ ಎಂದು ವರದಿಯಾಗಿದೆ.