ಬೆಂಗಳೂರು : ನಟಿ ರಮ್ಯಾ ಗೆ ಇತ್ತೀಚಿಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಮಾಡಿ ನಿಂದಿಸಿದ ಪ್ರಕರಣ ನಡೆದಿತ್ತು. ಇದೀಗ ಈ ಒಂದು ಪ್ರಕರಣ ಮುಗಿಯುತ್ತಿದ್ದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೂಡ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಹಾಕಿ ನಿಂದಿಸಿದ್ದಾರೆ. ಈ ವಿಚಾರವಾಗಿ ಸಿ.ಕೆ ಅಚ್ಚುಕಟ್ಟು ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು.
ಪ್ರಕರಣದ ದಾಖಲಿಸಿಕೊಂಡ ಪೊಲೀಸರು ಘಟನೆಯಗೆ ಸಂಬಂಧಿಸಿದಂತೆ ಮಾಹಿತಿ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ನೋಟಿಸ್ ನೀಡಿದ್ದಾರೆ. ಆದರೆ ನೋಟಿಸ್ ಗೆ ಇದುವರೆಗೂ ವಿಜಯಲಕ್ಷ್ಮಿ ಯಾವುದೇ ಉತ್ತರ ಸಹ ನೀಡಿಲ್ಲ ಎಂದು ತಿಳಿದು ಬಂದಿದೆ. ಮಾಹಿತಿ ನೀಡುವಂತೆ ಪೊಲೀಸರು ನೋಟಿಸ್ ನೀಡಿದ್ದು ನೋಟಿಸ್ ಬಂದರೂ ಕೂಡ ವಿಜಯಲಕ್ಷ್ಮಿ ಹಾಜರಾಗಿಲ್ಲ.
ಪೊಲೀಸರು ಇದೀಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ ಆರು ಸೋಶಿಯಲ್ ಮೀಡಿಯಾ ಖಾತೆಗಳ ಅಶ್ಲೀಲ ಪೋಸ್ಟ್ ಮಾಡಲಾಗಿದ್ದು ವಿಜಯಲಕ್ಷ್ಮಿಗೆ ಅಶ್ಲೀಲ ಪೋಸ್ಟ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾ ಖಾತೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಖಾತೆ ಐಡಿ ಮತ್ತು ಐಪಿ ಅಡ್ರೆಸ್ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಆರು ಖಾತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಐಟಿ 67, 66 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.