ಮೈಸೂರು : ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 5.30 ರವರೆಗೆ 66/11 ಕೆ.ವಿ ರಾಜೀವ್‌ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ರಾಜೀವನಗರ 2ನೇ ಹಂತ, ಕ್ರಿಶ್ಚಿಯನ್ ಕಾಲೋನಿ, ಯಾಸಿನ್ ಮಸ್ಜಿದ್, ಎಸ್.ಬಡಾವಣೆ, ಸೂರ್ಯನಾರಾಯಣ ದೇವಸ್ಥಾನ ರಸ್ತೆ, ಅಲ್ ಬಜಾರ್ ಮಸ್ಜಿದ್ ವೃತ್ತ, ಅಂಬೇಡ್ಕರ್ ಭವನ ರಸ್ತೆ, ಕ್ಯೂಬಾ ಮಸ್ಜಿದ್ ವೃತ್ತ, ನಾರಾಯಣ ಹೃದಯಾಲಯ ಆಸ್ಪತ್ರೆ, ಕಾಮನಕೆರೆಹುಂಡಿ, ಕೆ.ಹೆಚ್.ಬಿ. ಬಡಾವಣೆ, ಆರ್ ಟಿ ಒ-55, ಆಸೀನಾ ಬಡಾವಣೆ, ರಾಜೀವನಗರ 3ನೇ ಹಂತ ಸೇರಿದಂತೆ ವಿದ್ಯುತ್ ವ್ಯತ್ಯಯ ವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.