Monday, September 8, 2025
Google search engine

Homeರಾಜ್ಯರಾಜ್ಯದಲ್ಲಿ ಮಳೆಹಾನಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ರಾಜ್ಯದಲ್ಲಿ ಮಳೆಹಾನಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ೨೦೨೫ರ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಂಡ ಕ್ರಮಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಎಚ್ ಕೆ ಪಾಟೀಲ್ , ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಸಭೆಯ ಮುಖ್ಯಾಂಶಗಳು: ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ ೧ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.೪ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ ೭೨೧ಮಿ.ಮೀ ಇದ್ದು, ೭೫೩ ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.೨೩ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು.

ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.೨೪ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.೨೦ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ ೮೯೫.೬೨ ಟಿಎಂಸಿ ಇದ್ದು, ಪ್ರಸ್ತುತ ೮೪೦.೫೨ ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ ೮೫೬.೧೭ ಟಿಎಂಸಿ ಸಂಗ್ರಹ ಇತ್ತು.

ತುಂಗಾಭದ್ರಾ ಅಣೆಕಟ್ಟಿನ ೩೨ ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, ೮ ಕ್ರೆಸ್ಟ್ ಗೇಟ್ ಗಳು ಅಳವಡಿಕೆಗೆ ಸಿದ್ಧವಿದೆ. ಕ್ರೆಸ್ಟ್ ಗೇಟ್ ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ತುಂಗಾಭದ್ರಾ ಅಣೆಕಟ್ಟಿನ ೩೨ ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, ೮ ಕ್ರೆಸ್ಟ್ ಗೇಟ್ ಗಳು ಅಳವಡಿಕೆಗೆ ಸಿದ್ಧವಿದೆ. ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅದೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಲು ಸೂಚನೆ.

ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು.

ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು.

ಮುಂಗಾರು ಹಂಗಾಮಿನಲ್ಲಿ ಶೇ.೯೮ ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ ೮೨.೫೦ ಲಕ್ಷ ಹೆಕ್ಟೇರ್ ಇದ್ದು, ೮೦.೭೬ ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ.

ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, ೪೮೦೨೫೬ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. ೪೦೪೦೭ ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು ೫೨೦೬೬೩ ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು ೧೧೧ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು ೫.೫೫ಕೋಟಿ ಪರಿಹಾರ ನೀಡಲಾಗಿದೆ.

೬೫೧ಮನೆಗಳು ಸಂಪೂರ್ಣ ಹಾನಿಯಾಗಿದ್ದು, ೯೦೮೭ ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ ೬೪೯ ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ ೮೬೦೮ ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು.

ಈ ಅವಧಿಯಲ್ಲಿ ಒಟ್ಟು ೭೬೬ ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು ೧.೫೨ ಕೋಟಿ ಪರಿಹಾರ ವಿತರಿಸಲಾಗಿದೆ.

RELATED ARTICLES
- Advertisment -
Google search engine

Most Popular