Sunday, April 20, 2025
Google search engine

Homeರಾಜ್ಯಸುದ್ದಿಜಾಲತೆರಕಣಾಂಬಿಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ತೆರಕಣಾಂಬಿಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ವಿದ್ಯಾರ್ಥಿ ಸಂಘವನ್ನು ವನ್ಯಜೀವಿ ಛಾಯಾಗ್ರಾಹಕ ಆರ್.ಕೆ.ಮಧು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವನ್ಯಜೀವಿ ಛಾಯಾಗ್ರಾಹಕ ಆರ್.ಕೆ.ಮಧು, ವಿದ್ಯಾರ್ಥಿಗಳು ಶಾಲೆಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಯಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು. ಇದು ನಾಯಕತ್ವ ಗುಣ ಹಾಗೂ ಮನೋಬಲವನ್ನು ಬೆಳೆಸಿಕೊಳ್ಳಲು ಸಹಕಾರಿ. ಭಯ ಹಿಂಜರಿಕೆ ಬಿಟ್ಟು ನಿರ್ಭಯವಾಗಿ ಕಲಿಕೆಯಲ್ಲಿ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.

ವಸತಿ ಶಾಲಾ ಪ್ರಾಂಶುಪಾಲ ಮಹದೇವಪ್ರಸಾದ್ ಮಾತನಾಡಿ, ವಿದ್ಯಾರ್ಥಿ ಸಂಘವು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಮಕ್ಕಳು ಹೆಚ್ಚು ಕ್ರಿಯಾಶೀಲರಾಗಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ 13 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೂ ಪೋಷಕರ ಸಭೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳು ಪೋಷಕರು ಹಾಜರಿದ್ದರು.


RELATED ARTICLES
- Advertisment -
Google search engine

Most Popular