Wednesday, September 10, 2025
Google search engine

Homeರಾಜಕೀಯಮದ್ದೂರು ಗಲಭೆ: ಲಾಠಿಚಾರ್ಜ್, ಕಲ್ಲುತೂರಾಟ ಕುರಿತು ಉನ್ನತ ಮಟ್ಟದ ಸಭೆ

ಮದ್ದೂರು ಗಲಭೆ: ಲಾಠಿಚಾರ್ಜ್, ಕಲ್ಲುತೂರಾಟ ಕುರಿತು ಉನ್ನತ ಮಟ್ಟದ ಸಭೆ

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದ ಗಣೇಶ ವಿಸರ್ಜನೆಯ ಮೆರವಣಿಗೆಯ ಮೇಲೆ ನಡೆದ ಕಲ್ಲುತೂರಾಟ ಮತ್ತು ಹಿಂದೂ ಸಂಘಟನೆಗಳ ಮೇಲೆ ನಡೆದ ಲಾಠಿಚಾರ್ಜ್ ಘಟನೆಯ ಬಗ್ಗೆ ಇಂದು ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ತಪ್ಪಿತಸ್ಥರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ಕೇಳಲಾಗಿತ್ತು. ಅಲ್ಲದೆ, ಶಾಂತಿಯುತವಾಗಿ ನಡೆಯುತ್ತಿದ್ದ ಮೆರವಣಿಗೆಯ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸುವ ಅಗತ್ಯ ಏಕೆ ಉಂಟಾಯಿತು ಎಂಬುದರ ಬಗ್ಗೆ ಮಾಹಿತಿ ಪಡೆಯಲಾಯಿತು. ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆಯ ತ್ವರಿತ ಕಾರ್ಯಾಚರಣೆ ಮತ್ತು ಕಾನೂನು ಸುವ್ಯವಸ್ಥೆ ವೈಫಲ್ಯದ ಕುರಿತು ಗಂಭೀರ ಪ್ರಶ್ನೆಗಳು ಎತ್ತಲ್ಪಟ್ಟವು.

ಈ ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ R. ಅಶೋಕ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ಟಿ.ನಾರಾಯಣಸ್ವಾಮಿ, ಮಾಜಿ ಸಚಿವ ಸಿ.ಟಿ. ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಶ್ರೀ ಧೀರಾಜ್ ಮುನಿರಾಜ್, ಮೈಸೂರು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವ ಶ್ರೀ ಸಿ.ಎಸ್. ಪುಟ್ಟರಾಜು, ಶಾಸಕರಾದ ಎಂ. ಕೃಷ್ಣಪ್ಪ, ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಕುಮಾರ್ ಮತ್ತು ಇತರ ಪ್ರಮುಖ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular