ಮಡಿಕೇರಿ : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ನಾಳೆ ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಸುಣ್ಣದ ಬೀದಿ, ಖಾಸಗಿ ಬಸ್ ನಿಲ್ದಾಣ, ಪೋಲಿಸ್ ಸ್ಠೇಷನ್ ಹಿಂಬಾಗ, ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ರಾಮನಗರ, ಬಟ್ಟಮಕ್ಕಿ, ಎಡಮಕ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.