Friday, September 12, 2025
Google search engine

Homeರಾಜ್ಯಸುದ್ದಿಜಾಲರಾಜ್ಯದಲ್ಲಿ ಮತ್ತೆ ಭಾರೀ ಮಳೆ 5 ದಿನ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಮತ್ತೆ ಭಾರೀ ಮಳೆ 5 ದಿನ ಯೆಲ್ಲೋ ಅಲರ್ಟ್!

ವರದಿ: ಸ್ಟೀಫನ್ ಜೇಮ್ಸ್ ಬೆಳಗಾವಿ

ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಆರ್ಭಟಿಸಲಿದೆ. ಸೆಪ್ಟೆಂಬರ್ 11ರಿಂದ ಮುಂದಿನ ಐದು ದಿನಗಳವರೆಗೆ ಒಳನಾಡಿನ ಹಲವೆಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ (65 ರಿಂದ 115 ಮಿ.ಮೀ.) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೀದರ್, ಕಲಬುರಗಿ, ಯಾದಗಿರಿ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11 ಹಾಗೂ 12ರಂದು ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೋ ಅಲರ್ಟ್’ ಜಾರಿಗೊಂಡಿದೆ. ಸೆಪ್ಟೆಂಬರ್ 13 ಮತ್ತು 14ರಂದು ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ಕಲಬುರಗಿಯಲ್ಲಿ ಜೋರು ಗಾಳಿಯೊಂದಿಗೆ ಧಾರಾಕಾರ ಮಳೆಯ ಸಾಧ್ಯತೆ ಇದೆ. ಇದೇ ರೀತಿ, ಸೆಪ್ಟೆಂಬರ್ 15ರಂದು ಬೆಳಗಾವಿ ಜಿಲ್ಲೆಯ ಕೆಲವೆಡೆ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನೂ ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಮಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯ ನಿರೀಕ್ಷೆ ಇದೆ. ಆದರೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಕರಾವಳಿ ಭಾಗಗಳ ಜೊತೆಗೆ ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸದ್ಯಕ್ಕೆ ಭಾರೀ ಮಳೆಯ ಮುನ್ಸೂಚನೆ ಇಲ್ಲ. ಈ ಭಾಗಗಳಲ್ಲಿ ಮಳೆ ವಿರಾಮ ನೀಡಿದರೆ, ಒಳನಾಡಿನಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಿದೆ.

ಕಳೆದ ಎರಡು ದಿನಗಳಿಂದ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಕಂಡು ಬಂದಿದೆ. ಬಿಸಿಲು ಕಾಣದೆ, ಹಲವು ಕಡೆಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಒಡಿಶಾ ಮತ್ತು ಆಂಧ್ರ ಕರಾವಳಿಯ ಸಮೀಪ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಕ್ರಿಯವಾಗಿದ್ದು, ಅದರ ತೀವ್ರ ಪರಿಣಾಮದಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ತಂಪಾದ ಹವಾಮಾನ ಮುಂದುವರಿದಿದೆ. ಕಳೆದ ವಾರಾಂತ್ಯದವರೆಗೆ ಉತ್ತಮ ಮಳೆ ಕಂಡುಬಂದಿದ್ದರೂ, ಶನಿವಾರದ ನಂತರ ಮಳೆ ದಾಖಲಾಗಿಲ್ಲ. ನಗರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆಯಿದ್ದು, ಕನಿಷ್ಠ ತಾಪಮಾನ 20-21 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES
- Advertisment -
Google search engine

Most Popular