ಬೆಂಗಳೂರು: ಎಲ್ಲಾ ಬ್ಯಾಂಕುಗಳು ಜುಲೈ 1 ರಿಂದ ಸೆಪ್ಟಂಬರ್ 30ರವರೆಗೆ ನಡೆಯಲಿರುವ ಜನ ಸುರಕ್ಷಾ ಸ್ಯಾಚುರೇಶನ್ ಅಭಿಯಾನದಲ್ಲಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮ ವಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಸುರಕ್ಷಾ ಭೀಮ ಯೋಜನೆಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅರಿವು ಮೂಡಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಯತೀಶ್ ಆರ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.
ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಲೀಡ್ ಬ್ಯಾಂಕ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬ್ಯಾಂಕುಗಳು ತಮ್ಮ ವ್ಯಾಪ್ತಿಯಲ್ಲಿ ಈ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಹಾಗೂ ಸರ್ಕಾರಿ ಕಚೇರಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಗಳನ್ನು ಅಂಟಿಸುವುದರ ಮೂಲಕ ಯೋಜನೆಗೆ ಎಲ್ಲರೂ ನೋಂದಣಿ ಮಾಡಿಕೊಳ್ಳವಂತೆ ಮಾಡಬಹುದು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಆರ್.ಬಿ.ಐ ನ ಎಲ್.ಡಿ.ಓ ಇಲ ಸಾಹು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನರ್ಬಾಡ್) ಜಿಲ್ಲಾ ಅಭಿವೃದ್ಧಿ ಅಧಿಕಾರಿಗಳಾದ ಅಮಲ ಎಸ್ ಮಹೇಶ್ವರಿ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳಾದ ಕೆ.ಲಲಿತಾ, ಕೆನರಾ ಬ್ಯಾಂಕ್ ಸಹಾಯಕ ವ್ಯವಸ್ಥಾಪಕರಾದ ಶ್ರೀ ವಾತ್ಸವ್, ಬೆಂಗಳೂರು ನಗರ ಜಿಲ್ಲೆಯ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಸತೀಶ್.ಕೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರೆ ಬ್ಯಾಂಕುಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು