ಮೈಸೂರು : ಇತ್ತೀಚೆಗೆ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲುತೂರಾಟದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಸ್ಲೀಮರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದ ಜ್ಯೋತಿ ಎಂಬ ಮಹಿಳೆ ವಿರುದ್ಧ ಮೈಸೂರಿನಲ್ಲಿ ದೂರು ನೀಡಲಾಗಿದೆ.
ಮೈಸೂರು ನಗರ ೧೨ನೇ ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಜುನೇದ್ ಎಂಬುವವರು ಗುರುವಾರ ಬೆಳಗ್ಗೆ ಎರಡು ಪ್ರತ್ಯೇಕ ದೂರುಗಳನ್ನು ನೀಡಿದ್ದು, ಮೊದ ದೂರಿನಲ್ಲಿ
ಮದ್ದೂರಿನಲ್ಲಿ ಸೆ.೮ ರಂದು ಗಣಪತಿ ವಿಸರ್ಜನಾ ಸ್ಥಳದಲ್ಲಿ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ನಂತರ ನಡೆದ ಬಿಜೆಪಿ ಮತ್ತು ಸಂಘ ಪರಿವಾರದ ಪ್ರತಿಭಟನಾ ಮೆರವಣಿಯಲ್ಲಿ ಜ್ಯೋತಿ ಎಂಬ ಮಹಿಳೆಯು ಮುಸ್ಲೀಮರ ವಿರುದ್ಧ ಅತ್ಯಂತ ತುಚ್ಛಪದಗಳಿಂದ ನಿಂದನೆ ಮಾಡಿ ಸಮುದಾಯಕ್ಕೆ ಅಪಮಾನ ಮಾಡಿದ್ದು, ಭಯದ ವಾತಾವರಣ ಉಂಟು ಮಾಡಿದ್ದಾರೆ ಇವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಅವರು ದೂರಿನಲ್ಲಿ ಕೋರಿದ್ದಾರೆ.
ಸದರಿ ಪ್ರತಿಭಟನಾ ಮೆರವಣಿಗೆಯಲ್ಲಿ ಮುಸ್ಲೀಮರ ವಿರುದ್ಧ ಸಾರ್ವಜನಿವಾಗಿ ಅವಾಚ್ಯ ಶಬ್ದಗಳ ಬಳಕೆಯಿಂದ ಮುಸ್ಲಿಂ ಸಮುದಾಯದವರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಗೂ ಧಕ್ಕೆ ಉಂಟಾಗಿದೆ. ಜನರಲ್ಲಿ ಭಯ ಹಾಗೂ ಗೊಂದಲ ಸೃಷ್ಟಿಯಾಗಿದೆ. ಇಂತಹ ಕೃತ್ಯವು ಸಾರ್ವಜನಿಕ ಶಾಂತಿಗೆ ಭಂಗ ತಂದಿದ್ದು, ಮೇಲ್ಕಂಡ ಕಲ್ಲು ತೂರಾಟ ನಡೆಸಿದವರ ಮತ್ತು ಮುಸ್ಲೀಮರಿಗೆ ಅವಾಚ್ಯ ಶಭ್ದಗಳಿಂದ ನಿಂದನೆ ಮಾಡಿದ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಜುನೇದ್ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ನಸ್ರುಲ್ಲಾ, ಮೈನಾರಿಟಿ ವಿಭಾಗದ ಝಬಿ, ಸೈಯದ್ ಫಾರೂಖ್, ಮೊಹಮ್ಮದ್ ಸಲೀಂ ಇದ್ದರು.