ಮೈಸೂರು : ನಂಜನಗೂಡು ತಾಲೂಕು ಸುತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು. ತಾಲೂಕು ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿಯರಾದ ಶುಭಶ್ರೀ 400 ಮೀಟರ್ ಮತ್ತು 600 ಓಟದಲ್ಲಿ. ಪ್ರಥಮ ಸ್ಥಾನ, ಶ್ವೇತಾ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ, ಅಮೃತ 100 ಮೀಟರ್. 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ರಾಜೇಂದ್ರ ಪ್ರಸಾದ್ ತಟ್ಟೆ ಎಸೆತದಲ್ಲಿ ಪ್ರಥಮ, ಶ್ವೇತಾ ರಿಲೇಯಲ್ಲಿ ದ್ವಿತೀಯ ಸ್ಥಾನ. ಸ್ಪಂದನ ರಿಲೀಯಲ್ಲಿ ದ್ವಿತೀಯ ಸ್ಥಾನ, ಅಮೃತ ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಗಳನ್ನು ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಶಾಲಾ ಮುಖ್ಯ ಶಿಕ್ಷಕ ಬಿ ನಾಗರಾಜ್, ಶಾಲಾ ಸಮಿತಿ ಅಧ್ಯಕ್ಷ ರವಿ, ತರಬೇತಿ ಶಿಕ್ಷಕ ಮಹದೇವ ಪ್ರಸಾದ್ ಹಾಗೂ ಗ್ರಾಮಸ್ಥರು ಗೌರವಿಸಿ ಸನ್ಮಾನಿಸಿದರು.