Saturday, September 13, 2025
Google search engine

Homeರಾಜ್ಯಸುದ್ದಿಜಾಲಸಾಗರ: ಸೆ 19 ರಂದು ಲೋಕಾಯುಕ್ತ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

ಸಾಗರ: ಸೆ 19 ರಂದು ಲೋಕಾಯುಕ್ತ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆ 19 ರಂದು ಬೆಳಿಗ್ಗೆ 11.00 ಗಂಟೆಯಿAದ ಮಧ್ಯಾಹ್ನ 1.00ರವರೆಗೆ ಸಾಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.

ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಹಣ/ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular