Saturday, September 13, 2025
Google search engine

Homeರಾಜ್ಯಸುದ್ದಿಜಾಲನಾಳೆ ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ನಾಳೆ ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಮೀನಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಂಡಿರುವುದರಿಂದ ೧೧೦/೧೧ಕೆ.ವಿ ಮೀನಹಳ್ಳಿ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ ೧೧ಕೆ.ವಿ ಮಾರ್ಗಗಳಲ್ಲಿ ನಾಳೆ ಸೆ.೧೪ ರಂದು ಬೆಳಿಗ್ಗೆ ೦೯ ರಿಂದ ಸಂಜೆ ೦೫ ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು, ಚಾಗನೂರು ಚಾಗನೂರು ಕೃಷಿ ಪ್ರದೇಶಗಳು. ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು ಗ್ರಾಮ.

ಎಫ್-4 ಎ.ಟಿ.ಪಿ.ಎಸ್ ಚೆಳ್ಳಗುರ್ಕಿ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮ. ಎಫ್-5 ಹಗರಿ ಐಪಿ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಕೃಷಿ ಪ್ರದೇಶಗಳು.

ಎಫ್-6 ಫೀಡರ್ ಮಾರ್ಗದ ಎ-ಒನ್ ಕೋಲ್ಡ್ ಸ್ಟೋರೆಜ್, ಮೆ.ಜಾನಕಿ ಕಾರ್ಪೋ, ಮೆ.ಬಸಾಯಿ ಸ್ಟೀಲ್ ಮೆ.ಕ್ಲೀನ್ ಮ್ಯಾಕ್ಸ್ ಸೊಲಾರ್, ಕ್ಲೀನ್ ಸೋಲಾರ್, ಮೆ.ಮೌರ್ಯ ಸೀಲಾಮ್ ಸೋಲಾರ್ ಐ.ಪಿ.ಪಿ ಸೇರಿ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular