Saturday, September 13, 2025
Google search engine

Homeರಾಜ್ಯಸುದ್ದಿಜಾಲಹಾಸನ ದುರಂತ: ಜೆಡಿಎಸ್ ಪಕ್ಷದಿಂದ ಪರಿಹಾರ ಘೋಷಣೆ

ಹಾಸನ ದುರಂತ: ಜೆಡಿಎಸ್ ಪಕ್ಷದಿಂದ ಪರಿಹಾರ ಘೋಷಣೆ

ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ.

ಬೆಂಗಳೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿ ಎಂದರು.

ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜೊತೆಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 20 ಸಾವಿರ ಪರಿಹಾರ ನೀಡಲಾಗುತ್ತದೆ ಎಂದರು.

RELATED ARTICLES
- Advertisment -
Google search engine

Most Popular