ಮೈಸೂರು: ಮೈಸೂರು ದಸರಾ ಅಂಗವಾಗಿ ಮಾವುತರು ಮತ್ತು ಕಾವಾಡಿಗರ ಕುಟುಂಬಗಳಿಗೆ ಜಿಲ್ಲಾಡಳಿತದ ವತಿಯಿಂದ ರವಿವಾರ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾವುತರಿಗೆ ಉಪಹಾರ ಬಡಿಸಿದರು.
ಇದೇ ವೇಳೆ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಚಿವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕರುಗಳಾದ ತನ್ವೀರ್ ಸೇಠ್, ಜಿ.ಟಿ.ದೇವೆಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರ್ ನಾಥ್, ದಸರಾ ವಸ್ತು ಪ್ರದರ್ಶನದ ಅಧ್ಯಕ್ಷ ಅಯ್ಯೂಬ್ ಖಾನ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀ ಕಾಂತ ರೆಡ್ಡಿ, ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿಸಿಪಿ ಬಿಂದೂಮಣಿ, ಸುಂದರ್ ರಾಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.