Wednesday, September 17, 2025
Google search engine

Homeರಾಜ್ಯಸುದ್ದಿಜಾಲಕಾರ್ಮಿಕರ ಪತ್ತಿನ ಸಹಕಾರ ಸಂಘಕ್ಕೆ ₹34.78 ಲಕ್ಷ ನಿವ್ವಳ ಲಾಭ: ಜಿ.ಎನ್.ಲೋಕೇಶ್

ಕಾರ್ಮಿಕರ ಪತ್ತಿನ ಸಹಕಾರ ಸಂಘಕ್ಕೆ ₹34.78 ಲಕ್ಷ ನಿವ್ವಳ ಲಾಭ: ಜಿ.ಎನ್.ಲೋಕೇಶ್

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ನಮ್ಮ ಸಂಘವು ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಪ್ರಸಕ್ತ ಸಾಲಿನಲ್ಲಿ ೩೪.೭೮ ಲಕ್ಷ ರೂಗಳ ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಜಿ.ಎನ್.ಲೋಕೇಶ್ ಹೇಳಿದರು.

ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ಗಿರಿಜಮ್ಮ ಬಳೆಬಸವರಾಜಪ್ಪ ಧರ್ಮಶಾಲೆಯಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಾರ್ಮಿಕರ ಪತ್ತಿನ ಸಹಕಾರ ಸಂಘದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಸಂಘದಲ್ಲಿ ೧೬೭೮ ಮಂದಿ ಷೇರುದಾರ ಸದಸ್ಯರಿದ್ದು, ೧.೨೫ ಕೋಟಿ ಷೇರು ಬಂಡವಾಳ ಹೊಂದಿದ್ದು, ೭.೯೬ ಕೋಟಿ ಸಾಲ ವಿತರಿಸಲಾಗಿದೆ. ಸಾಲ ಪಡೆದ ಸದಸ್ಯರು ಸಕಾಲದಲ್ಲಿ ಮರುಪಾವತಿ ಮಾಡಬೇಕು. ಇದರಿಂದ ಇತರ ಸದಸ್ಯರಿಗೆ ಸಾಲ ನೀಡಲು ಅನುಕೂಲವಾಗಲಿದೆ. ಸಂಘದಲ್ಲಿ ಇ-ಸ್ಟಾö್ಯಂಪಿAಗ್ ಸೌಲಭ್ಯವಿದ್ದು, ಸದಸ್ಯರು ಮತ್ತು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಪ್ರತೀ ವರ್ಷ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಮತ್ತು ಪದವಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.೮೫ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಸದಸ್ಯರನ್ನು ಸನ್ಮಾನಿಸಲಾಗುತ್ತದೆ. ಮರಣ ಹೊಂದಿz ಸದಸ್ಯರ ಕುಟುಂಬದ ನಾಮಿನಿದಾರರಿಗೆ ಒಂದು ಲಕ್ಷ ರೂ ಮರಣನಿಧಿ ನೀಡಲಾಗುವುದು. ಸದಸ್ಯರು ಇವುಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಮತ್ತು ಪದವಿ ಪರೀಕ್ಷೆಗಳಲ್ಲಿ ಶೇ.೮೫ಕ್ಕಿಂತ ಹೆಚ್ಚು ಅಂಕ ಗಳಿಸಿದ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸಲಾಯಿತಲ್ಲದೆ, ನಿವೃತ್ತ ಸದಸ್ಯರನ್ನು ಅಭಿನಂದಿಸಲಾಯಿತು. ಸಂಘದ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಎ.ಎನ್.ಮಂಜುನಾಥ್ ವಾರ್ಷಿಕ ವರದಿ ಮತ್ತು ೨೦೨೫-೨೬ನೇ ಸಾಲಿನ ಆಯ-ವ್ಯಯವನ್ನು ಮಂಡಿಸಿ ಮಹಾಸಭೆಯ ಅನುಮೋದನೆ ಪಡೆದರು.

ಸಂಘದ ಗೌರವಾಧ್ಯಕ್ಷ ಕೆ.ಎಸ್.ಗಣೇಶ್, ಉಪಾಧ್ಯಕ್ಷ ಎಂ.ಎನ್.ಅರುಣ್, ನಿರ್ದೇಶಕರಾದ ಆರ್.ಕೃಷ್ಣೇಗೌಡ, ಡಿ.ಶಿವಣ್ಣ, ಡಿ.ಶಿವಪ್ರಕಾಶ್, ಕೆ.ಎನ್.ಪ್ರಸನ್ನಕುಮಾರ್, ಜಿ.ಎಲ್.ಅಕ್ಷಯ್, ಬಿ.ಕೆ.ರವಿ, ಆರ್.ಎನ್.ಪಾಲಾಕ್ಷ, ಮುಖ್ಯಕಾರ್ಯನಿರ್ವಾಹಕಾಧಿಕಾರಿ ಎ.ಎನ್.ಮಂಜುನಾಥ್, ಸಿಬ್ಬಂದಿಗಳಾದ ಎನ್.ಹೇಮಲತಾ, ಕೆ.ಎಸ್.ಶ್ರುತಿ ಹಾಜರಿದ್ದರು.


RELATED ARTICLES
- Advertisment -
Google search engine

Most Popular