Tuesday, September 23, 2025
Google search engine

Homeಅಪರಾಧಕಾನೂನುಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಾಪಸ್: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಒಪ್ಪಿಗೆ

ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಾಪಸ್: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಒಪ್ಪಿಗೆ

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಿಬಿಐ ತನಿಖೆಯನ್ನು ವಾಪಸ್‌ ಪಡೆದಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಒಪ್ಪಿಗೆ ಸಿಕ್ಕಿದೆ.

ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇಂದು ಮುಖ್ಯ ನ್ಯಾಯಮೂರ್ತಿ ಬಿಆರ್‌ ಗವಾಯಿ ಹಾಗೂ ನ್ಯಾಯಮೂರ್ತಿ ಕೆ ವಿನೋದ್‌ ಚಂದ್ರನ್‌ ಅವರ ನೇತೃತ್ವದ ಪೀಠ ವಿಚಾರಣೆ ನಡೆಸಿತು.

ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿತು. ಈ ವೇಳೆ ಡಿಕೆ ಶಿವಕುಮಾ‌ರ್ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ ಸಿಂಫ್ಟಿ ಅವರು, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಎಂದು ಸಿಜೆಐ ಈ ಹಿಂದೆ ಹೇಳಿದ್ದರು ಎಂದು ಪೀಠದ ಗಮನಕ್ಕೆ ತಂದರು.

ಡಿಕೆ ಶಿವಕುಮಾ‌ರ್ ಅವರು ಆದಾಯಕ್ಕಿಂತ ಅಧಿಕ ಅಕ್ರಮ ಆಸ್ತಿ ಗಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್ 25 ರಂದು ಸಿಬಿಐ ತನಿಖೆಗೆ ವಹಿಸಿತ್ತು. ಕೇಂದ್ರ ತನಿಖಾ ಸಂಸ್ಥೆಯು ಶಿವಕುಮಾರ್ ವಿರುದ್ಧ ಅಕ್ಟೋಬರ್ 3, 2020 ರಂದು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದೆ.

RELATED ARTICLES
- Advertisment -
Google search engine

Most Popular