Wednesday, September 24, 2025
Google search engine

Homeಸ್ಥಳೀಯಇಂದು ಮಹಿಷ ದಸರಾ ಆಚರಣೆ : ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

ಇಂದು ಮಹಿಷ ದಸರಾ ಆಚರಣೆ : ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದ್ದು ಈಗಾಗಲೇ ಯುವ ದಸರಾ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ನಗರದಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ.

ಇನ್ನು ನಿನ್ನೆ ಯುವ ದಸರಾ 2025ಕ್ಕೆ ಚಾಲನೆ ಸಿಕ್ಕಿದ್ದು, 5 ದಿನಗಳ ಕಾಲ ಯುವದಸರಾ ಸಂಭ್ರಮಾಚರಣೆ ಇರಲಿದೆ. ನಿನ್ನೆ ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಯುವ ದಸರಾ ಕಾರ್ಯಕ್ರಮಕ್ಕೆ ಚಾಲನೆ ಕೊಟ್ರು ಮೊದಲ ದಿನವಾದ ನಿನ್ನೆ ಅರ್ಜುನ್ ಜನ್ಯ ಮ್ಯೂಸಿಕ್ ಕಲರವ ಜೋರಾಗಿತ್ತು. ಬೆಂಗಳೂರು ಮೂಲದ ಲಗೋರಿ ಬ್ಯಾಂಡ್‌ಗೆ ಯುವಕರು ಕುಣಿದು ಕುಪ್ಪಳಿಸಿದ್ರು.

RELATED ARTICLES
- Advertisment -
Google search engine

Most Popular