Sunday, September 28, 2025
Google search engine

Homeರಾಜ್ಯಸುದ್ದಿಜಾಲಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ನ್ಯಾ. ಹೇಮಾವತಿ ಸೂಚನೆ

ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ನ್ಯಾ. ಹೇಮಾವತಿ ಸೂಚನೆ

ಹಾಸನ: ಪೋಕ್ಸೋ ಕಾಯ್ದೆ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಲು ಕ್ರಮವಹಿಸುವಂತೆ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಹೇಮಾವತಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಪೋಕ್ಸೋ ಸಮಿತಿ ಮತ್ತು ಜಿಲ್ಲಾ ಮಟ್ಟದ ಬಾಲನ್ಯಾಯ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುವುದರ ಮೂಲಕ ಸಂಕಷ್ಟಕ್ಕೆ ಸಿಲುಕುವವರನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಲು ನಿರ್ದೇಶನ ನೀಡಿದರು.

ಪೋಕ್ಸೋ ಕಾಯ್ದೆ ಅಡಿ ಶಿಕ್ಷೆ ಆಗಿರುವ ಬಗ್ಗೆ ಪತ್ರಿಕೆಗಳಲ್ಲಿ ಪ್ರಚಾರ ಆದರೆ ಜನರಲ್ಲಿ ಸ್ಪಲ್ಪ ಭಯ ಬರುತ್ತದೆ ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರಲ್ಲದೆ, ವೃತ್ತಿಗೆ ದ್ರೋಹ ಮಾಡಬಾರದು ಈ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಸೂಚಿಸಿದರು.

ಪ್ರಕರಣಗಳನ್ನು ಕಡಿಮೆ ಮಾಡಲು ಎಲ್ಲರ ಪ್ರಯತ್ನ ಅತ್ಯಗತ್ಯ ಎಂದ ಅವರು ಸಾರ್ವಜನಿಕರಿಗೆ ಹೆಚ್ಚು ಹೆಚ್ಚು ಕಾನೂನಿನ ಅರಿವು ಮೂಡಿಸಿ ಎಂದು ತಿಳಿಸಿದರಲ್ಲದೆ, ಸುಶಿಕ್ಷಿತ ಸಂಸ್ಕಾರವನ್ನು, ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು ಇಲ್ಲವಾದಲ್ಲಿ ಮಕ್ಕಳಲ್ಲಿ ಅಪರಾಧದ ಸಂಖ್ಯೆ ಹೆಚ್ಚಳವಾಗುವುದು. ಈ ಬಗ್ಗೆ ಪೋಷಕರು, ಶಿಕ್ಷಕರು, ಸಮುದಾಯ, ಸಮಾಜ ಎಲ್ಲಾರೂ ಒಂದಾಗಿ ಶ್ರಮಿಸಬೇಕು ಮತ್ತು ಮಕ್ಕಳಲ್ಲಿ ಅಪರಾಧಿಯ ಭಾವನೆ ಬೆಳೆಯದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.

ಮಕ್ಕಳನ್ನು ನಾವು ಕೇವಲ ಶಿಕ್ಷಣವಂತರನ್ನಾಗಿ ಮಾಡುತ್ತಿದ್ದೇವೆ ಹೊರತು ಸಂಸ್ಕಾರವAತರನ್ನಾಗಿ ರೂಪಿಸುತ್ತಿಲ್ಲ ಇದರ ಪರಿಣಾಮವೇ ಪೋಕ್ಸೋದಂತಹ ಹೀನಕೃತ್ಯಗಳು, ಅಪರಾಧಗಳಲ್ಲಿ ಗಣನೀಯ ಏರಿಕೆಯಾಗುತ್ತಿದೆ ಎಂದರು.

ಕರ್ನಾಟಕ ಉಚ್ಚ ನ್ಯಾಯಾಲ ಯದ ನಿರ್ದೇಶನದ ಮೇರೆಗೆ ಪ್ರತಿ ಜಿಲ್ಲಾ ಮಟ್ಟದಲ್ಲಿ ಪೋಕ್ಸೋ ಸಮಿತಿ ಮತ್ತು ಬಾಲನ್ಯಾಯ ಸಮಿತಿಯನ್ನು ರಚಿಸಲಾಗಿದೆ ಅದರನ್ವಯ ಪ್ರತಿ ತಿಂಗಳು ಇದಕ್ಕೆ ಸಂಬAಧಿಸಿದAತೆ ಪರಿಶೀಲನಾ ಸಭೆಯನ್ನು ನಡೆಸಲಾಗುತ್ತಿದ್ದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು, ಸಮಗ್ರ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಎಲ್ಲರ ಸಮನ್ವತೆಯಲ್ಲಿ ಸಮಿತಿಗಳನ್ನು ರಚಿಸಲಾಗಿದೆ.

ನ್ಯಾಯಾಲಯಗಳು ಕೇವಲ ಪ್ರಕರಣಗಳಲ್ಲಿ ವಿಚಾರಣೆ ಯನ್ನು ನಡೆಸಿ ತೀರ್ಪು ನಡೆಸುವಷ್ಟಕ್ಕೆ ಸೀಮಿತವಾಗದೆ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದೆ. ಜಿಲ್ಲಾ ಮಟ್ಟದ ಅನುಪಾಲನಾ ಅಧಿಕಾರಿಗಳ ಜವಾಬ್ದಾರಿಯನ್ನು ಹೆಚ್ಚಿಸುವ ಮೂಲಕ ಮಕ್ಕಳಿಗೆ ಸಂರಕ್ಷಣೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಪೋಕ್ಸೋದಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಪ್ರತಿ ಜಿಲ್ಲೆಯಲ್ಲೂ ಶೀಘ್ರ ವಿಲೇವಾರಿ ನ್ಯಾಯಾಲಯಗಳನ್ನು ತೆರೆಯಲಾಗಿದೆ ಅಲ್ಲದೆ ಪ್ರತಿ ಪ್ರಕರಣಗಳನ್ನು ವಿಲೇವಾರಿ ಮಾಡಲು ಅವಧಿಯನ್ನು ನೀಗಢಿಗೊಳಿಸಿದ್ದು, ಅಪರಾಧ ರುಜುವಾತಾದ ಪ್ರಕರಣಗಳಲ್ಲಿ ಕಾಯ್ದೆಯನುಸಾರ ಶಿಕ್ಷೆಯನ್ನು ನೀಡಲಾಗುತ್ತಿದೆ ಎಂದು ಅಧಿಕ ಜಿಲ್ಲಾ ನ್ಯಾಯಾಧೀಶರಾದ ದೇವರಾಜು ಹೆಚ್.ಎಂ. ತಿಳಿಸಿದರು.

ಬಾಲನ್ಯಾಯ ಮಂಡಳಿಯಲ್ಲಿ ಸಂಘರ್ಷಕ್ಕೊಳಗಾದ ಮಕ್ಕಳಿಗೆ ಅಪರಾಧಿಯ ಮನೋಭಾವ ಬೆಳೆಯದಂತೆ ಮನೆಯ ವಾತಾವರಣವನ್ನು ಕಲ್ಪಿಸಿ ಕೊಟ್ಟು ಅವರನ್ನು ಉತ್ತಮ ಪ್ರಜೆಗಳಾಗುವಂತೆ ರೂಪಿಸಲಾಗುವುದು ಅಲ್ಲದೆ ಶೀಘ್ರವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಬಾಲನ್ಯಾಯ ಮಂಡಳಿಯ ಅಧ್ಯಕ್ಷರು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಗಿರಿಗೌಡ ರವರು ತಿಳಿಸಿದರು.

ಪ್ರತಿ ಮಾಹೆಯಾನ ನಡೆಯುವ ಸಭೆಯಲ್ಲಿ ಕೇವಲ ಅಂಕಿ ಅಂಶಗಳ ಪರಿಶೀಲನೆ ಮಾಡದೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಲ್ಲಿ ಸಂಭAಧಿಸಿದ ಇಲಾಖೆಗಳ ಸಹಯೋಗದಲ್ಲಿ ಅರಿವನ್ನು ಮೂಡಿಸಲಾಗುತ್ತಿದೆ ಮತ್ತು ಪ್ರಕರಣಗಳಲ್ಲಿ ಉಚಿತ ಕಾನೂನು ನೆರವು ನೀಡಲಾಗುತ್ತಿದ್ದು ಕಾನೂನು ನೆರವು ಅಭಿರಕ್ಷರನ್ನು ಇದಕ್ಕಾಗಿ ನೇಮಿಸಿಕೊಳ್ಳಲಾಗಿದೆ ಪ್ರತಿ ಶಾಲಾ ಕಾಲೇಜುಗಳಲ್ಲಿ ನಿರಂತರವಾಗಿ ಪೋಕ್ಸೋ ಕಾಯ್ದೆ ಮಕ್ಕಳ ಅಪರಾಧಗಳ ಬಗ್ಗೆ ಅರಿವು ಕಾರ್ಯಕ್ರಮಗಳ ನ್ನು ನಡೆಸುವಂತೆ ಸಂಬAಧ ಪಟ್ಟ ಇಲಾಖೆಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯರ್ಶಿ ದಾಕ್ಷಾಯಿಣಿ ಜಿ.ಕೆ ರವರು ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಜಿಲ್ಲಾಧಿಕಾರಿ ಕಚೇರಿಯ ಸಹಾಯಕರಾದ ರಮೇಶ್ ,ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದಿಲೀಪ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಮಧುಕುಮಾರಿ ಎಂ.ಎಸ್, ಕಾನೂನು ನೆರವು ಅಭಿರಕ್ಷಕರುಗಳು ಮತ್ತು ಪ್ಯಾನಲ್ ವಕೀಲರು ಮತ್ತಿತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular