ಬೆಂಗಳೂರು: ನಗರದಲ್ಲಿ ಸಿಎಂ ಸಿದ್ಧರಾಮಯ್ಯ ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ. ಇಂದು ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದಿಂದ ಹೊರಗೆ ಬಂದು ಕುಳಿತಿರುವ ತ್ಯಾಜ್ಯಯವನ್ನು ಗಮನಿಸಿದಂತ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳ ವಿರುದ್ಧ ಗರಂ ಆದರು. ಅಲ್ಲದೇ ಬಿ ಸ್ಮೈಲ್ ರಾಘವೇಂದ್ರ ಪ್ರಸಾದ್ ಮತ್ತು ಪ್ರಹ್ಲಾದ್ ಗೆ ನೋಟಿಸ್ ಕೊಡಲು ಸೂಚಿಸಿದ್ದಾರೆ.

ವಾರ್ಡ್ ನಂಬರ್ 23 ರ ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಒಳಗೆ ಇರಬೇಕಾದ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಹೊರಗೆ ಬಂದು ರಾಶಿ ಬಿದ್ದಿರುವುದನ್ನು ಗಮನಿಸಿದ ಸಿಎಂ ಸಿಟ್ಟಾದರು. ಸಂಗ್ರಹಣಾ ಕೇಂದ್ರದ ಒಳಗೆ ಸಾಕಷ್ಟು ಜಾಗ ಖಾಲಿ ಇರುವುದನ್ನು ಗಮನಿಸಿದ ಸಿಎಂ ಬಿ ಸ್ಮೈಲ್ ಚೀಫ್ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು
ಬಳಿಕ ಅಲ್ಲಿಂದ ಕೆಲವೇ ದೂರದಲ್ಲಿ ರಸ್ತೆಯಲ್ಲಿ ಜೆಲ್ಲಿ ಕಲ್ಲುಗಳು ಬಿದ್ದಿರುವುದನ್ನು ಗಮನಿಸಿ ಇದಕ್ಕೆ ಕಾರಣರಾದ ಮತ್ತೋರ್ವ ಎಂಜಿನಿಯರ್ ಚೀಫ್ ರಾಘವೇಂದ್ರ ಪ್ರಸಾದ್ ಅವರಿಗೂ ನೋಟಿಸ್ ನೀಡಿ ಎಂದು ಸಿಎಂ ಸೂಚಿಸಿದರು.
ಇದಷ್ಟೇ ಅಲ್ಲದೇ ಬೆಂಗಳೂರಿನ ರಸ್ತೆ ಪಕ್ಕದಲ್ಲೇ ತ್ಯಾಜ್ಯ ಸುರಿದಿದ್ದನ್ನು ಗಮನಿಸಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಬೆಂಗಳೂರು ಸಿಟಿ ರೌಂಡ್ಸ್ ವೇಳೆಯಲ್ಲಿ ನಿರ್ಲಕ್ಷ್ಯ ವಹಿಸಿದಂತ ಅಧಿಕಾರಿಗೆ ಸ್ಥಳದಲ್ಲೇ ನೋಟೀಸ್ ನೀಡಲು ಖಡಕ್ ಸೂಚನೆ ನೀಡಿದರು.
