Monday, September 29, 2025
Google search engine

Homeರಾಜ್ಯಸುದ್ದಿಜಾಲಸಹಾಯಧನಕ್ಕೆ ಅರ್ಜಿ ಆಹ್ವಾನ

ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಶ್ರಮ ಶಕ್ತಿ ಯೋಜನೆ, ವೃತ್ತಿಯೋಜನೆ, ಸಾಲ ಮತ್ತು ಸಹಾಯಧನ ಹಾಗೂ ವ್ಯಾಪಾರ ಮತ್ತು ಉದ್ಯಮಗಳಿಗೆ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಸಾಂತ್ವನ ಯೋಜನೆ ಹಾಗೂ ಮಹಿಳಾ ಸ್ವ ಸಹಾಯ ಸಂಘ ಗುಂಪುಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ https:// kmdconline.karnataka.gov.in/ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೆÇೀಲೀಸ್ ಠಾಣೆ ಹತ್ತಿರ, ಎಫ್‍ಎಂಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಿಗೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08272-201449 ಸಹಾಯವಾಣಿ ಸಂಖ್ಯೆ 8277944222 ಗೆ ಸಂಪರ್ಕಿಸಬಹುದು. “ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್, 16 ಕೊನೆಯ ದಿನವಾಗಿದೆ. ಕಚೇರಿಯಿಂದ ಸಂಪರ್ಕಿಸುವ ಮೊದಲು ಸಲ್ಲಿಸಿರುವ ಅರ್ಜಿ ಹಾಗೂ ದಾಖಲಾತಿಗಳನ್ನು ಜಿಲ್ಲಾ ಕಚೇರಿಗೆ ಸಲ್ಲಿಸುವಂತಿಲ್ಲ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular