ಬಾಗಲಕೋಟೆ : ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಇನೋವಾ ಹಾಗೂ ಟಂಟಂ ವಾಹನ ಮುಖಾಮುಖಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ಮಹೇಶ್ ನಾಯ್ಕರ್ (27) ಹಾಗೂ ಮಹಬೂಬ್ ಶೇಖ್ (30) ಎಂದು ಗುರುತಿಸಲಾಗಿದೆ. ಇನ್ನು ನವನಗರದ 45 ನೇ ಸೆಕ್ಟರ್ ನಿವಾಸಿಗಳಾದ ವಿಶಾಲ ವರತಿಲ್ಲೆ, ವಿಜಯಕುಮಾರ್ ಹಾಗೂ ಗುರುಪ್ರಸಾದ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ.
ಇನೋವಾ ಕಾರು ಚಾಲಕನ ಅಜಾಗರೂಕತೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನ್ ಡಿಕ್ಕಿ ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂ ಟಂ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.