Saturday, October 4, 2025
Google search engine

Homeರಾಜ್ಯಸಿಎಂ ಬದಲಾವಣೆ ಚರ್ಚೆಲೇ ಇಲ್ಲ : ಸುರ್ಜೇವಾಲಾ ಸ್ಪಷ್ಟನೆ

ಸಿಎಂ ಬದಲಾವಣೆ ಚರ್ಚೆಲೇ ಇಲ್ಲ : ಸುರ್ಜೇವಾಲಾ ಸ್ಪಷ್ಟನೆ

ಬೆಂಗಳೂರು : ನಿನ್ನೆ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಮುಂದಿನ ಬಾರಿಯೂ ನಾನೇ ದಸರಾ ಮಹೋತ್ಸವ ಉದ್ಘಾಟಿಸುತ್ತೇನೆ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ತಿಳಿಸಿದ್ದಾರೆ. ಇದೀಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಸಿಎಂ  ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಲ್ಲಿ ಮಾತಾನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಸುರ್ಜೇವಾಲ, ಯಾರೂ ಪಕ್ಷದ ಚೌಕಟ್ಟು ಮೀರಬಾರದು ಅಂತಾ ಸೂಚನೆ ಕೊಟ್ಟಿದ್ದರೂ ಕೆಲವರು ಅದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಇನ್ನು ಮತಗಳ್ಳತನ ಕುರಿತು ಮಾತನಾಡಿದ ಅವರು, ಮತಗಳ್ಳತನ ಮಹದೇವಪುರ ಮತ್ತು ಆಳಂದ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಬೇರೆ ಬೇರೆ ಕ್ಷೇತ್ರಗಳಲ್ಲೂ ನಡೆದಿದೆ. ಮಹಾರಾಷ್ಟ್ರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಸಂವಿಧಾನ ನೀಡಿದ ಹಕ್ಕು ಕಿತ್ತುಕೊಳ್ತಿರುವ ಕಾರಣ ಕಾಂಗ್ರೆಸ್​ ‘ವೋಟ್ ಚೋರಿ’ ಅಭಿಯಾನ ನಡೆಸುತ್ತಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular