ವರದಿ: ಸ್ಟೀಫನ್ ಜೇಮ್ಸ್
ಬೆಳಗಾವಿ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡುವುದು, ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನ ಸೆಳೆದರು.
ಬೆಳಗಾವಿ ವಿಮಾನ ನಿಲ್ದಾಣದಿಂದ ಸ್ಮಾರ್ಟ್ ಸಿಟಿಯಿಂದ ನಿರ್ಮಾಣವಾಗಿರುವ ನೂತನ ಬಸ್ ನಿಲ್ದಾಣ ವೀಕ್ಷಣೆ ಮಾಡಿ ಬಿಮ್ಸ್ ಸೂಪರ್ ಶ್ಪೇಶಾಲಿಟಿ ಆಸ್ಪತ್ರೆಯ ಲೋಕಾರ್ಪಣೆಗೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ನಡೆಸುತ್ತಿರುವ ಪ್ರತಿಭಟನೆ ಕಂಡು ಕಾರಿನಲ್ಲಿಯೇ ಕೈ ಮಾಡಿ ತೆರಳಿದರು.
ಅತಿವೃಷ್ಟಿ ಮಳೆಯಿಂದ ಕಾಳು ಕಡಿ ಧಾನ್ಯ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ರೈತರು ತೊಂದರೆಯಲ್ಲಿದ್ದಾರೆ. ಆದ್ದರಿಂದ ಸೊಯಾಬಿನ್, ಹೆಸರು, ಉದ್ದು, ಮೆಕ್ಕೆಜೋಳ, ತೊಗರಿ, ಹತ್ತಿ, ಬಟಾಟಿ, ಕಬ್ಬು ಹೆಚ್ಚುಕಡಿಮೆ ಉತ್ತರ ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ ಪ್ರತಿ ಎಕರೆಗೆ 40 ಸಾವಿರ ಪರಿಹಾರ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ಬ್ಯಾಂಕಗಳು ಮತ್ತು ಫೈನಾನ್ನಗಳ ಕಿರುಕುಳ, ಲೀಲಾವು ಪ್ರಕ್ರಿಯೆ ಅಮಾನವೀಯವಾಗಿದ್ದು, ರೈತರ ನಿರಂತರ ಹಾನಿಯಲ್ಲಿರುವ ಸಂದರ್ಭ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.