Sunday, October 5, 2025
Google search engine

Homeಬ್ರೇಕಿಂಗ್ ನ್ಯೂಸ್ಉದ್ಯೋಗಡೆಸ್ಕ್ಟಾಪ್ ಪಬ್ಲಿಷಿಂಗ್ : ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಡೆಸ್ಕ್ಟಾಪ್ ಪಬ್ಲಿಷಿಂಗ್ : ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಡೆಸ್ಕ್ಟಾಪ್ ಪಬ್ಲಿಷಿಂಗ್ (Computer DTP) ಕುರಿತು 45 ದಿನಗಳ ಉಚಿತ ತರಬೇತಿಯನ್ನು ಅಕ್ಟೋಬರ್ 27 ರಿಂದ ಹಮ್ಮಿಕೊಳ್ಳಲಾಗಿದ್ದು ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ:, 9113880324, 9481506564, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular