Tuesday, October 7, 2025
Google search engine

Homeರಾಜ್ಯಸುದ್ದಿಜಾಲಹಾಸನಾಂಬ ಜಾತ್ರಾ ಮಹೋತ್ಸವ: ಧಾರ್ಮಿಕ ಸಂಸ್ಥೆಗಳ ನೌಕರರಿಗೆ ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ

ಹಾಸನಾಂಬ ಜಾತ್ರಾ ಮಹೋತ್ಸವ: ಧಾರ್ಮಿಕ ಸಂಸ್ಥೆಗಳ ನೌಕರರಿಗೆ ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ

ಹಾಸನ : ಹಾಸನ ಜಿಲ್ಲೆ, ಹಾಸನ ಟೌನ್ ಶ್ರೀ ಹಾಸನಾಂಬ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಸದರಿ ದೇವಾಲಯದಲ್ಲಿ ಪ್ರತೀ ವರ್ಷ ಶ್ರೀ ಹಾಸನಾಂಬ ದೇವಿಯ ಜಾತ್ರೋತ್ಸವ ಕಾರ್ಯಕ್ರಮವು ಅಭೂತಪೂರ್ವವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದೆ. ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 9 ರಂದು ಬಾಗಿಲು ಓಪನ್ ಆಗಲಿದ್ದು, ಅಕ್ಟೋಬರ್ 23ರಂದು ಬಾಗಿಲು ಮುಚ್ಚಲಾಗುವುದು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತ್ರ ಸಂಹಿತೆಯನ್ನು ಪಾಲಿಸುವುದು ಸೂಕ್ತವಾಗಿದ್ದು, ಈ ಬಗ್ಗೆ ದಿನಾಂಕ:19.09.2025 ರಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ನಿರ್ಣಯವಾಗಿರುತ್ತದೆ.

ಆದ್ದರಿಂದ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58 ರಂತೆ ಹಾಸನ ಜಿಲ್ಲೆ ಹಾಸನ ಟೌನ್ ಶ್ರೀ ಹಾಸನಾಂಬ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ದೇವಾಲಯದ ಗರ್ಭಗುಡಿಗೆ ಪ್ರವೇಶಿಸಲು ಪುರುಷರು ಪಂಚೆ, ದೋತಿಯಂತಹ ಅಥವಾ ಪೈಜಾಮದಂತಹ ಹಾಗೂ ಮಹಿಳೆಯರು ಸೀರೆ ಮತ್ತು ಚೂಡಿದಾರದಂತಹ ಸಾಂಪ್ರದಾಯಿಕ ಉಡುಗೆಗಳಲ್ಲಿ ಮಾತ್ರ ಅವಕಾಶ ಕಲ್ಪಿಸುವುದು. ಯಾವುದೇ ರೀತಿಯ ಕರ್ತವ್ಯ ನಿರತ ಸಿಬ್ಬಂದಿಗಳು ಸಮವಸ್ತ್ರ, ಸಹಿತವಾಗಿ ಗರ್ಭಗುಡಿ ಪ್ರವೇಶಿಸಲು ಅವಕಾಶವಿರುವುದಿಲ್ಲ.

ಜನದಟ್ಟಣೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವ ಉದ್ದೇಶದಿಂದ ಶಿಷ್ಟಾಚಾರ ದರ್ಶನದ ಸಮಯದಲ್ಲಿ ಮಾತ್ರ ಈ ಹಿಂದಿನAತೆ ಶಿಷ್ಟಾಚಾರದಂತೆ ಗರ್ಭಗುಡಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದು, ಉಳಿದ ಸಮಯದಲ್ಲಿ ಜಿಲ್ಲಾಧಿಕಾರಿಗಳು ಅಥವಾ ದೇವಾಲಯದ ಆಡಳಿತಾಧಿಕಾರಿಯವರು ಲಿಖಿತ ಅನುಮತಿ ನೀಡಿದಲ್ಲಿ ಮಾತ್ರ ಗರ್ಭಗುಡಿಗೆ ಪ್ರವೇಶಿಸಲು ನಿಯಮಾನುಸಾರ ಅವಕಾಶ ನೀಡಲು ಸೂಚಿಸಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.

ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸದಲ್ಲಿ ನಿಯೋಜಿತಗೊಂಡ ಕರ್ತವ್ಯ ನಿರತ ಸಿಬ್ಬಂದಿಗಳು ಮಾನ್ಯ ಆಯುಕ್ತರ ಆದೇಶದಂತೆ ಕ್ರಮವಹಿಸಲು ಸೂಚಿಸಿದ್ದು ಹಾಗೂ ಇಲಾಖಾ ಮುಖ್ಯಸ್ಥರು ನಿಯೋಜಿತ ಸಿಬ್ಬಂದಿಗಳಿಗೆ ಈ ಕುರಿತು ಮಾಹಿತಿ ನೀಡಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಲತಾ ಕುಮಾರಿ ಅವರು ಆದೇಶಿಸಿದ್ದಾರೆ.

RELATED ARTICLES
- Advertisment -
Google search engine

Most Popular