Wednesday, October 8, 2025
Google search engine

Homeಅಪರಾಧಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳು ಬಂಧನ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕೊಲೆ ಪ್ರಕರಣ: ನಾಲ್ವರು ಆರೋಪಿಗಳು ಬಂಧನ

ಬಳ್ಳಾರಿ : ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯ ಕ್ಷ ವೆಂಕಟೇಶ್ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗಂಗಾವತಿ ಬಿಜೆಪಿ ಯುವ ಮೋರ್ಚಾ ಅಧ್ಯ ಕ್ಷ ವೆಂಕಟೇಶ್ ಕೊಲೆ ಪ್ರಕರಣ ಸಂಬಂಧ ಐವರು ಆರೋಪಿಗಳ ಪೈಕಿ ನಾಲ್ವರು ಆರೋಪಿಗಳನ್ನು ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಧನಂಜಯ್, ಮೈಲಾರಿ ಅಲಿಯಾಸ್ ವಿಜಯ್,ಸಲೀಂ, ಭೀಮ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಲೀಲಾವತಿ ಆಸ್ಪತ್ರೆಯ ಮುಂಭಾಗ ತಡರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಕ್ರೌರ್ಯ ನಡೆದಿದ್ದು, ಮಧ್ಯರಾತ್ರಿ 2 ಗಂಟೆಗೆ ಕಾರಲ್ಲಿ ಅಗಮಿಸಿದ್ದ ದುಷ್ಕರ್ಮಿಗಳು ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ನೇಹಿತರೊಂದಿಗೆ ಊಟ ಮುಗಿಸಿದ ವೆಂಕಟೇಶ್ ದೇವಿ ಕ್ಯಾಂಪ್ ನಿಂದ ಗಂಗಾವತಿಗೆ ಹೋಗುತ್ತಿದ್ದ ವೇಳೆ ಬೈಕ್ ಫಾಲೋ ಮಾಡಿದ ದುಷ್ಕರ್ಮಿಗಳು ಕಾರಿನಿಂದ ವೆಂಕಟೇಶ್ ಇದ್ದ ಬೈಕ್ ಗೆ ಗುದ್ದಿಸಿದ್ದಾರೆ. ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಗಂಗಾವತಿ ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular