ಕಾರವಾರ : ಯುವಕರಿಗೆ ಜಾಬ್ ಕೊಡಿಸುವ ನೆಪದಲ್ಲಿ ವಂಚನೆ ಜಾಲ ರಾಜ್ಯದ ಅನೇಕ ಕಡೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ನೂರಾರು ಯುವಕರು ಮೋಸ ಹೋಗ್ತಿದ್ದಾರೆ.
ಇದೀಗ ಕುವೈತ್ ನಲ್ಲಿ ಉದ್ಯೋಗ ಕೊಡಿಸುವ ಆಮಿಷ ತೋರಿಸಿ ಸುಮಾರು 30 ಯುವಕರಿಗೆ ತಂಡವೊಂದು ಪಂಗನಾಮ ಹಾಕಿದ್ದು, ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30 ಯುವಕರಿಂದ ಬರೋಬ್ಬರಿ 52 ಲಕ್ಷ ರೂಪಾಯಿ ಹಣ ಪಡೆದು ತಂಡವೊಂದು ವಂಚಿಸಿದೆ. ಆರೋಪಿಗಳಾದ ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದ್ರಾಬಾದ್ ಮೂಲದ ಸುಜಾತ ಜಮ್ಮಿ, ನಿರುದ್ಯೋಗಿ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದರು ಎನ್ನಲಾಗಿದೆ.
ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಖಾಲಿ ಇದೆ ಎಂಬ ಜಾಲತಾಣದ ಪ್ರಕಟಣೆ ತೋರಿಸಿ ಆಮಿಷ ಒಡ್ಡಿತ್ತು.ಲಕ್ಷಾಂತರ ರೂಪಾಯಿ ಸಂಬಳದ ಆಸೆ ತೋರಿಸಿ ವಂಚನೆ ಮಾಡಿತ್ತು.
ಹಣ ನೀಡಿ ವರ್ಷ ಕಳೆದರೂ ಉದ್ಯೋಗದ ಬಗ್ಗೆ ಸುಳಿವಿಲ್ಲದ ಕಾರಣ ಜಾಫರ್ನನ್ನು ನೌಶಾದ್ ಮತ್ತೆ ಪ್ರಶ್ನಿಸಿದ್ದರು. ಅಂತಿಮವಾಗಿ ಇದೊಂದು ಮೋಸದ ಜಾಲ ಅನ್ನೋದು ಗೊತ್ತಾಗಿದೆ.
ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.