ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತು ಈಗಾಗ್ಲೇ ಹಲವಾರು ಬಾರಿ ಚರ್ಚೆ ನಡೆದಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು ಬಿಹಾರ್ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಬಿಹಾರ್ ಫಲಿತಾಂಶ ಬಳಿಕ ಸಂಪುಟ ಪುನಾರಚನೆ ಪಕ್ಕಾ ಎಂದು ಹೇಳಲಾಗುತ್ತಿದೆ. ಸುಮಾರು 15ಕ್ಕೂ ಹೆಚ್ಚು ಸಚಿವರನ್ನು ಸಂಪುಟದಿಂದ ಸಿಎಂ ಸಿದ್ದರಾಮಯ್ಯ ಕೈ ಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಚಿವರನ್ನ ಕೈಬಿಟ್ಟು ಹೊಸ ತಂಡ ಸಿದ್ದಪಡಿಸುವ ಸಾಧ್ಯತೆ ಇದೆ. ಈಗಾಗಲೇ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಮಾತುಕತೆ ನಡೆಸಲಾಗಿದೆ.
ಸಂಪುಟ ಪುನಾರಚನೆ ಮೂಲಕ ಸಂದೇಶದ ಲೆಕ್ಕಾಚಾರ ಹಾಕಲಾಗಿದ್ದು, ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶಕ್ಕೆ ಪ್ಲಾನ್ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಕೆ.ಸಿ ವೇಣುಗೋಪಾಲ್ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡಿದ್ದಾರೆ. ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ. ಅಕ್ಟೊಬರ್ 14 ರಂದು ಔತಣಕೂಟ ಆಯೋಜಸಿದ್ದಾರೆ. ಕ್ಯಾಬಿನೆಟ್ ಸರ್ಜರಿಗೂ ಮುನ್ನ ಔತಣಕೂಟ ವ್ಯವಸ್ಥೆ ಮಾಡಿದ್ದಾರೆ.