ಮಡಿಕೇರಿ : ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಬಿ ಶೆಟ್ಟಿಗೇರಿ ಮಾರ್ಗದಲ್ಲಿ ಇಂದು ಅಕ್ಟೋಬರ್, 10 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಪಂಜರಪೇಟೆ, ಕಲ್ಲುಬಾಣೆ, ನಿಸರ್ಗ ಬಡಾವಣೆ, ಕಾವೇರಿ ಕಾಲೇಜು, ಚಾಮುಂಡಿ ಬಡಾವಣೆ ಮತ್ತು ಬಿ ಶೆಟ್ಟಿಗೇರಿ ಫೀಡರ್‍ನ ಬಿಟ್ಟಂಗಾಲ, ಬಾಳುಗೋಡು, ವಿ ಬಾಡಗ, ಕುಟ್ಟಂದಿ, ಕೊಂಗಾಣ, ಟಿ ಶೆಟ್ಟಿಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.