ಹಾಸನ : ಹಾಸನ ನಗರದ ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ, ಹಾಸನ ವತಿಯಿಂದ ಇಂದಿನಿಂದ ಅ.10 ರಿಂದ ಅ.22 ರವರೆಗೆ ನಗರದ ಚನ್ನಪಟ್ಟಣ ಕೆರೆ ಅಂಗಳದಲ್ಲಿರುವ ಹೆಲಿಪ್ಯಾಡ್ ಬಳಿ ಏರ್ಪಡಿಸಲಾಗಿದ್ದ ಹೆಲಿಟ್ಯೂಸರಿಂಗೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಅವರು ಉದ್ಘಾಟಿಸಿದರು. ನಂತರ ಪೋಸ್ಟರ್ ಬಿಡುಗಡೆ ಮಾಡಿದರು.

ಈ ವೇಳೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪೂರ್ಣಿಮಾ ಬಿ.ಆರ್, ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಮತ್ತಿತರರು ಹಾಜರಿದ್ದರು.