ಬೆಂಗಳೂರು : ಆರ್ ಎಸ್ ಎಸ್ ನೂರು ವರ್ಷ ಭರ್ತಿ ಬೆನ್ನಲ್ಲೇ ಬಿಗ್ ಶಾಕ್ ಎದುರಾಗಿದ್ದು, ಆರ್ ಎಸ್ ಎಸ್ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಬ್ರಿಕ್ ಹಾಕುತ್ತಾ? ಎನ್ನುವ ಕುರಿತು ಚಿಂತನೆ ನಡೆಯುತ್ತಿದೆ. ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧದ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ. ಸಾರ್ವಜನಿಕ ಸರಕಾರಿ ಸ್ಥಳಗಳಲ್ಲಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಕೆಲವು ಸಚಿವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಾಲಾ ಕಾಲೇಜು ಆವರಣ, ಉದ್ಯಾನವನ, ಸರ್ಕಾರಿ ಮೈದಾನ, ವಿವಿಧ ಹಾಸ್ಟೆಲ್ ಕ್ಯಾಪಸ್ ಗಳಲ್ಲಿ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ವಿವಿಧ ಹಾಸ್ಟೆಲ್ ಮತ್ತು ಕ್ಯಾಂಪಸ್ ಗಳಲ್ಲಿ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ.
ಇದೆ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದಾರೆ. ನನ್ನ ಪತ್ರದಲ್ಲಿ ಬಹಳ ಸ್ಪಷ್ಟವಾಗಿ ಸಿಎಂ ಗೆ ಮನವಿ ಮಾಡಿಕೊಂಡಿದ್ದು, ಸರ್ಕಾರಿ ಶಾಲೆಗಳು, ಸರ್ಕಾರಿ ಅನುದಾನಿತ ಶಾಲೆಗಳು, ಸರ್ಕಾರಿ ಮೈದಾನಗಳು, ಉದ್ಯಾನವನಗಳಲ್ಲಿ, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಪ್ರಾಚ್ಯ ವಸ್ತು ಅಥವಾ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕಬೇಕು ಎಂದು ಮನವಿ ಮಾಡಿದ್ದೇನೆ. ಅವರು ಏನು ಪಥ ಸಂಚಲನ ಮಾಡುತ್ತಾರೋ ಹಲವರು ಕಡೆಗೆ ವಿಥೌಟ್ ಪರ್ಮಿಷನ್ ದೊಣ್ಣೆ ಬಳಸಿಕೊಂಡು ಕೈಯಲ್ಲಿ ಹಿಡುಕೊಂಡು ನೂರಾರು ಜನ ಪ್ರಚೋದನ ಘೋಷಣೆಗಳನ್ನು ಕೂಗುತ್ತಾ ಹೋಗುತ್ತಾರೆ.
ಅದು ಸರಿಯಲ್ಲ ನೀವು ಮಾಡುವ ಹಾಗಿದ್ದರೆ ಖಾಸಗಿ ಮಾಡಿಕೊಳ್ಳಲಿ ಯಾವುದೇ ತೊಂದರೆ ಇಲ್ಲ. ನಿಮ್ಮ ನಾಯಕರ ಖಾಸಗಿ ಶಾಲೆಗಳು, ಮೈದಾನಗಳು,ಫಾರ್ಮರ್ಸ್ಗಳು, ಇರುತ್ತವೆ ಅಲ್ಲಿ ಮಾಡಿಕೊಳ್ಳಲು ನಮ್ಮದೇನು ಅಭ್ಯಂತರವಿಲ್ಲ. ಆದರೆ ಸರ್ಕಾರಿ ಜಾಗದಲ್ಲಿ ಪಬ್ಲಿಕ್ ಸ್ಥಳಗಳಲ್ಲಿ ಇದನ್ನು ನಿರ್ಬಂಧ ಮಾಡಬೇಕು ನಿಷೇಧ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.